ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಇಳಿಯುವಂತೆ ವಿವೇಕಾನಂದ ಪ.ಪೂ ಕಾಲೇಜಿನಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಪುತ್ತೂರು: ಚಂದ್ರನ ಮೇಲೆ ಚಂದ್ರಯಾನ ನೌಕೆಯ ವಿಕ್ರಮ್ ಲ್ಯಾಂಡರ್ ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತರರಾಗಿರುವ ಜನರು ಒಂದೆಡೆಯಾದರೆ, ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಇಳಿಯುವಂತೆ ವಿವೇಕಾನಂದ ಪದವಿ ಪೂರ್ವ ಕಾಲೇಜು ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.23 ರಂದು ಬೆಳಗ್ಗಿನ ಪೂಜೆಯ ಸಂದರ್ಭ ಪ್ರಾರ್ಥಿಸಲಾಯಿತು.
ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಾರ್ಥನೆ ಮಾಡಿದರು. ಈ ಸಂದರ್ಭ ವಿವೇಕಾನಂದ ಪದವಿ ಪೂರ್ವ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ , ಕಾರ್ಯದರ್ಶಿ ಗೋಪಾಲಕೃಷ್ಣ ಭಟ್ , ಸದಸ್ಯ ಡಾ. ಕೃಷ್ಣಪ್ರಸನ್ನ, ಕೋಶಾಧಿಕಾರಿ ಸಚಿನ್ ಶೆಣೈ, ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಉಷಾ, ಬಿ ಚರಣ್, ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಸತೀಶ್ ರಾವ್, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೋಶಾಧಿಕಾರಿ ಅಶೋಕ್ ಕುಂಬಳೆ ಉಪಸ್ತಿತರಿದ್ದರು.