ಪುತ್ತೂರು: ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಆರ್ಯಾಪು ಗ್ರಾಮದ ಸಂಪ್ಯ ಕಂಬಳತ್ತಡ್ಡ ನಾರಾಯಣ ಶೆಟ್ಟಿಯವರ ಪುತ್ರ ಸೀತಾರಾಮ ಶೆಟ್ಟಿ ಆ.23ರಂದು ಹೃದಯಾಘಾತದಿಂದ ನಿಧನರಾದರು.
ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಬಾರ್ & ರೆಸ್ಟೋರೆಂಟ್ ನ್ನು ನಿರ್ವಹಣೆ ಮಾಡುತ್ತಿದ್ದ ಸೀತಾರಾಮ ಶೆಟ್ಟಿ ಎಂದಿನಂತೆ ಆ.23 ಬಾರ್ & ರೆಸ್ಟೋರೆಂಟ್ ಗೆ ಬಂದಿದ್ದ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.