ಆ.25: ನಿಡ್ಪಳ್ಳಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ, ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಸಮಿತಿ ನಿಡ್ಪಳ್ಳಿ ಇವುಗಳ ಜಂಟಿ ಆಶ್ರಯದಲ್ಲಿ 5ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಆ.25 ರಂದು ಸಂಜೆ ಗಂಟೆ 5.30 ರಿಂದ ವೇದಮೂರ್ತಿ ದಿನೇಶ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ನಡೆಯಲಿದೆ.

ಸಂಜೆ ಗಂಟೆ 5.30ಕ್ಕೆ ಪೂಜೆ ಪ್ರಾರಂಭವಾಗಿ 7.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಂತರ ರಾತ್ರಿ 8.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here