ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ನ ಮಾಸಿಕ ಸಭೆಯು ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ರವರ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಈ ಕಳಕಂಡ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಸಪ್ಟೆಂಬರ್ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶವನ್ನು ನಡೆಸುವುದೆಂದು ತೀರ್ಮಾನಿಸಲಾಯಿತು. ಈ ಸಮಾರಂಭಕ್ಕೆ ರಾಜ್ಯ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೌರಾಡಳಿತ ಸಚಿವರಾದ ಬೈರತಿ ಸುರೇಶ್ ರವರನ್ನು ಆಮಂತ್ರಿಸುವುದೆಂದು ತೀರ್ಮಾನಿಸಲಾಯಿತು.
ಜಿಲ್ಲೆಯ ಎಲ್ಲಾ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ಸಭೆಯನ್ನು ನಡೆಸುವುದು ಮತ್ತು ಜಿಲ್ಲೆಯಿಂದ ಪಂಚಾಯತ್ ನ ನೂತನ ಅಧ್ಯಕ್ಷರು ಉಪಾಧ್ಯಕ್ಷರು ಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದೆಂದು ತೀರ್ಮಾನಿಸಲಾಯಿತು. ಈ ಮೊದಲು ಆಗಸ್ಟ್ 30ರ ಒಳಗೆ ಎಲ್ಲಾ ಬ್ಲಾಕ್ ನ ಪಂಚಾಯತ್ ರಾಜ್ ಸಂಘಟನೆಯ ಪದಾಧಿಕಾರಿಗಳನ್ನು ನೇಮಿಸಿಕೊಂಡು ಕಾರ್ಯಪ್ರವೃತ್ತರಾಗಬೇಕೆಂದು ಅಧ್ಯಕ್ಷರು ಸೂಚಿಸಿದರು.
ಜಿಲ್ಲಾ ಪದಾಧಿಕಾರಿಗಳಾದ ವೃಂದಾ ಪೂಜಾರಿ, ಸಂತೋಷ ಕುಮಾರ್, ರಾಜಶೇಖರ್ ಶೆಟ್ಟಿ, ಜಗದೀಶ್ ಕೊಯಿಲ, ಅಶ್ವಿನಿರಾಜ್, ರಝಕ್ ಕುಕ್ಕಾಜೆ, ಹೈದರ್ ಕೈರಂಗಳ , ಯಶವಂತ ಶೆಟ್ಟಿ, ಸಂದೇಶ ಶೆಟ್ಟಿ , ಫೌಜಿಯಾ , ಲಕ್ಷ್ಮಣ ಶೆಟ್ಟಿ ಜುಬೈರ್,ಪದ್ಮನಾಭ ಪೂಜಾರಿ, ಸನತ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.