ಆ.25: ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಪುಣಚ: ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುಣಚ ಹಾಗೂ ಶ್ರೀ ದೇವಿ ಮಹಿಳಾ ಮಂಡಳಿ ದೇವಿನಗರ ಇವರ ಸಹಭಾಗಿತ್ವದಲ್ಲಿ ನಡೆಯುವ 21ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯು ಆ.25ರಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.

ವೇದಮೂರ್ತಿ ಸುಬ್ರಾಯ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ದೇವಿನಗರ ಶ್ರೀದೇವಿ ಮಹಿಳಾ ಭಜನಾ ಮಂಡಳಿ ಯವರಿಂದ ಭಜನೆ, ಪೂಜಾರಂಭ, ನಂತರ‌ ನಡೆಯುವ ಸಭಾ ಕಾರ್ಯಕ್ರಮಲ್ಲಿ ಅಳಿಕೆ ಸತ್ಯ ಸಾಯಿ ಲೋಕಸೇವಾ ಪ್ರೌಢ ಶಾಲಾ ನಿವೃತ್ತ ಶಿಕ್ಷಕಿ ವಿಜಯಾ ಪುಂಡರೀಕ ರಾವ್ ಸಭಾಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಯಾಗಿ ಮಂಗಳೂರು ಕುಳೂರು ಸನಾತನ ಸಂಸ್ಥೆಯ ಕಾರ್ಯಕರ್ತೆ ಲಕ್ಷ್ಮೀ ಪೈ ಭಾಗವಹಿಸಲಿದ್ದಾರೆ. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ ಎಂದು ವರಮಹಾಲಕ್ಕ್ಮೀ ಪೂಜಾ ಸಮಿತಿ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here