ಪುತ್ತೂರು: ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಚಂದ್ರಯಾನ-3 ಯೋಜನೆ ಯಶಸ್ವಿಯಾದ ಹಿನ್ನಲೆಯಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ‘ಜ್ಞಾನಬಿಂಬ’ ಭಿತ್ತಿಪತ್ರಿಕೆಯ ತಂಡ ರೂಪಿಸಿದ ಚಂದ್ರಯಾನ-3 ಯೋಜನೆಯ ಕುರಿತಾದ ವಿಶೇಷ ಸಂಚಿಕೆಯನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ನಿರ್ದೇಶಕರಾದ ಬಿ.ಕೆ. ರವೀಂದ್ರ ಬಿಡುಗಡೆಗೊಳಿಸಿದರು. ಇದೇ ವೇಳೆ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮಿಕಾಂತ ರೈ ಅನಿಕೂಟೇಲ್ ಚಂದ್ರಯಾನ -3 ಯೋಜನೆ ಸಾಗಿಬಂದ ದಾರಿಗಳನ್ನು ಹಾಗೂ ಅದರ ಸಂಪೂರ್ಣ ಮಾಹಿತಿಯನ್ನು ನೀಡಿದರು. ನಂತರ ಇಸ್ರೋ ಸಂಸ್ಥೆಯ ಸಾಧನೆಯನ್ನು ಹಾಗೂ ವಿಜ್ಞಾನಿಗಳ ಪರಿಶ್ರಮಕ್ಕೆ ಚಪ್ಪಾಳೆಯ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಮತಿ ಅಕ್ಷತಾ ಎ.ಪಿ., ಬೋಧಕ ಹಾಗೂ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.