ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಸತತ 6 ನೇ ಬಾರಿ”ಸಾಧನಾ ಪ್ರಶಸ್ತಿ”

0

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಮಹಾ ಸಭೆಯಂದು 2022-23ನೇ ಸಾಲಿನಲ್ಲಿ ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಮತ್ತು ಉತ್ತಮ ಬಾಂಧವ್ಯ ಹೊಂದಿದ ಸಹಕಾರಿ ಸಂಸ್ಥೆ ಎಂದು ಗುರುತಿಸಿ “ಸಾಧನಾ ಪ್ರಶಸ್ತಿ”ಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಮತ್ತು ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ರಿಗೆ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಎ. ಆನಂದ ಆಚಾರ್ಯ, ನಿರ್ದೇಶಕ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞ ಮೂರ್ತಿ, ವಿಜಯ ಆಚಾರ್, ಕೆ.ಶಶಿಕಾಂತ್ ಆಚಾರ್ಯ, ಗಿರೀಶ್‌ ಕುಮಾರ್‌ ಯು, ಮಲ್ಲಪ್ಪಎನ್. ಪತ್ತಾರ್, ರೋಹಿಣಿ ಎಂ.ಪಿ., ರಮೇಶ್‌ ರಾವ್‌ ಯು. ಮತ್ತು ಕೆ ಪ್ರಕಾಶ್‌ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here