ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಮಹಾ ಸಭೆಯಂದು 2022-23ನೇ ಸಾಲಿನಲ್ಲಿ ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಮತ್ತು ಉತ್ತಮ ಬಾಂಧವ್ಯ ಹೊಂದಿದ ಸಹಕಾರಿ ಸಂಸ್ಥೆ ಎಂದು ಗುರುತಿಸಿ “ಸಾಧನಾ ಪ್ರಶಸ್ತಿ”ಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಮತ್ತು ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ರಿಗೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಎ. ಆನಂದ ಆಚಾರ್ಯ, ನಿರ್ದೇಶಕ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞ ಮೂರ್ತಿ, ವಿಜಯ ಆಚಾರ್, ಕೆ.ಶಶಿಕಾಂತ್ ಆಚಾರ್ಯ, ಗಿರೀಶ್ ಕುಮಾರ್ ಯು, ಮಲ್ಲಪ್ಪಎನ್. ಪತ್ತಾರ್, ರೋಹಿಣಿ ಎಂ.ಪಿ., ರಮೇಶ್ ರಾವ್ ಯು. ಮತ್ತು ಕೆ ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು.