




ಪುತ್ತೂರು: ಮಾಂಗಲ್ಯ ವರಪ್ರದಾಯಕ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.25ರಂದು ನಡೆಯಿತು



ಅರ್ಚಕ ಪ್ರಸಾದ್ ಅಡಿಗರವರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಶಿಖರ ಪ್ರತಿಷ್ಠೆ, ಸಂಕಲ್ಪ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಶ್ರೀಉಮಾಮಹೇಶ್ವರ ಸೇವಾ ಟ್ರಸ್ಟ್ನ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.












