ಕಲ್ಲಾರೆ ರಾಘವೇಂದ್ರ ಮಠದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಕಲ್ಲಾರೆ, ವಿಶ್ವಹಿಂದು ಪರಿಷತ್ ಮಾತೃ ಮಂಡಳಿ ಇದರ ವತಿಯಿಂದ 49ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.25ರಂದು ಕಲ್ಲಾರೆ ಶ್ರೀಗುರು ರಾಘವೇಂದ್ರ ಮಠದ ಕಲಾ ಮಂಟಪದಲ್ಲಿ ನಡೆಯಿತು.

ಬೆಳಿಗ್ಗೆ ಶಿಖರ ಪ್ರತಿಷ್ಠೆ, ಸಂಕಲ್ಪ, ಲಲಿತ ಸಹಸ್ರನಾಮ, ತಿರುಪತಿ ತಿರುಮಲ ಟ್ರಸ್ಟ್‌ನಿಂದ ಭಜನೆ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಕಲ್ಲಾರೆ, ವಿಶ್ವಹಿಂದು ಪರಿಷತ್ ಮಾತೃ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here