ಶಟಲ್ ಬ್ಯಾಡ್ಮಿಂಟನ್- ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಬಾಲಕಿಯರ ಪ್ರೌಢಶಾಲಾ ವಿಭಾಗ ಜಿಲ್ಲಾ ಮಟ್ಟಕ್ಕೆ

0

ಕಾಣಿಯೂರು : ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯ ಸಹಯೋಗದಲ್ಲಿ ಪುತ್ತೂರು ಆಫೀಸರ್ಸ್ ಕ್ಲಬ್ ನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾಣಿಯೂರುಪ್ರಗತಿ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ನೇಹಾಶ್ರೀ ಎ ‍ಎಸ್, ನನ್ಮಯಿ ಎಮ್ ಮತ್ತು ಶಿಲ್ಪ ಪ್ರಥಮ ಸ್ಥಾನ ಪಡೆದು ಆ 29 ರಂದು ಮಂಗಳೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ , ಶಾಲಾ ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.
ಇವರಿಗೆ ಶಾಲಾ ಟ್ರಸ್ಟಿ ಆಗಿರುವ ಶ್ರೀ ಹರಿಚರಣ್ ರೈ ಮಾದೋಡಿಯವರು ತರಬೇತಿ ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ಸಹಕರಿಸಿದರು.

LEAVE A REPLY

Please enter your comment!
Please enter your name here