ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ – ಧಾರ್ಮಿಕ ಸಭೆ

0

ಪುಣಚ: ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುಣಚ ಹಾಗೂ ಶ್ರೀ ದೇವಿ ಮಹಿಳಾ ಮಂಡಳಿ ದೇವಿನಗರ ಇವರ ಸಹಭಾಗಿತ್ವದಲ್ಲಿ ನಡೆಯುವ 21ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯು ಆ. 25ರಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.

ಬೆಳಿಗ್ಗೆ ವೇದಮೂರ್ತಿ ಸುಬ್ರಾಯ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ದೇವಿನಗರ ಶ್ರೀದೇವಿ ಮಹಿಳಾ ಭಜನಾ ಮಂಡಳಿ ಯವರಿಂದ ಭಜನೆ, ಪೂಜಾರಂಭ ಗೊಂಡಿತು.
ಧಾರ್ಮಿಕ ಸಭೆ:
ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮಲ್ಲಿ ಅಳಿಕೆ ಸತ್ಯ ಸಾಯಿ ಲೋಕಸೇವಾ ಪ್ರೌಢ ಶಾಲಾ ನಿವೃತ್ತ ಶಿಕ್ಷಕಿ ವಿಜಯಾ ಪುಂಡರೀಕ ರಾವ್ ಸಭಾಧ್ಯಕ್ಷತೆ ವಹಿಸಿ ವರಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ಆಚರಣೆ ಬಗ್ಗೆ ಮಾತನಾಡಿ ಶುಭ ಮಾತುಗಳನ್ನಾಡಿದರು.
ಮುಖ್ಯ ಅತಿಥಿಯಾಗಿ ಮಂಗಳೂರು ಕುಳೂರು ಸನಾತನ ಸಂಸ್ಥೆಯ ಕಾರ್ಯಕರ್ತೆ ಲಕ್ಷ್ಮೀ ಪೈ ಭಾಗವಹಿಸಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ನುಡಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ನಿರ್ಮಲಾ, ಪುಣಚ ಗ್ರಾ.ಪಂ.ಅಧ್ಯಕ್ಷೆ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕಾರ್ಯದರ್ಶಿ ಬೇಬಿ ಪಟಿಕಲ್ಲು, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ : 2010ರ ನಂತರ ಮೂರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಗ್ರಾಮದ ದಂಪತಿಗಳನ್ನು ಹಾಗೂ ಪುಣಚ ಗ್ರಾ.ಪಂ. ಘನತ್ಯಾಜ್ಯ ಘಟಕದ ವಾಹನ ಚಾಲಕಿ ಉಷಾ, ಸ್ವಚ್ಛತಾ ಸಿಬ್ಬಂದಿಗಳಾದ ಲೀಲಾ, ಸುಮತಿ ಯವರನ್ನು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ವಾಣಿಶ್ರೀ ಪ್ರಾರ್ಥಿಸಿದರು. ವೀಕ್ಷಾ ಸ್ವಾಗತಿಸಿ, ರಜನಿ ಧನ್ಯವಾದ ಗೈದರು.
ದೀಕ್ಷಾ ಹಾಗೂ ತಾರಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಪೂಜಾ ಸಮಿತಿ ವತಿಯಿಂದ ಬಳೆ, ಕುಂಕುಮ ಮತ್ತು ನೂಲುಗಳನ್ನು ಭಕ್ತಾದಿಗಳಿಗೆ ವಿತರಿಸಲಾಯಿತು.
ದೇವಸ್ಥಾನದ ಆಡಳಿತ ಸಮಿತಿ, ವರಮಹಾಲಕ್ಷ್ಮಿ ಪೂಜಾ ಸಮಿತಿ, ಶ್ರೀ ದೇವಿ ಮಹಿಳಾ ಮಂಡಳಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here