ಒಕ್ಕಲಿಗ ಮಹಿಳಾ ಗೌಡ ಸಂಘದಿಂದ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ಒಕ್ಕಲಿಗ ಮಹಿಳಾ ಗೌಡ ಸಂಘದ ನೇತೃತ್ವದಲ್ಲಿ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆ.25ರಂದು ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.


ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕ ರವಿ ನೆಲ್ಲಿತ್ತಾಯ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಂಟ್ವಾಳ ತಾಲೂಕಿನ ಗೌಡ ಮಹಿಳಾ ಸಂಘದ ಅಧ್ಯಕ್ಷೆ ಜಲಜಾಕ್ಷಿ ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಲೀಲಾವತಿ ನೇರಳ ಅವರನ್ನು ಗೌರವಿಸಲಾಯಿತು. ಒಕ್ಕಲಿಗ ಮಹಿಳಾ ಗೌಡ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ ಗೌಡ, ಪ್ರಧಾನ ಕಾರ್ಯದರ್ಶಿ ವಾರಿಜ ಬೆಳಿಯಪ್ಪ ಗೌಡ, ಒಕ್ಕಲಿಗ ಗೌಡ ಸಂಘದ ಸಲಹಾ ಸಮಿತಿ ಉಪಾಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here