ಪುತ್ತೂರು: ತುಳು ಅಪ್ಪೆ ಕೂಟ ಪುತ್ತೂರು ವತಿಯಿಂದ ಉದಿಪನ, ತಮ್ಮನ ಬಲ್ಮನ, ಪಂಚ ಮಿನದನ ಲೇಸ್ ಆ.27 ರಂದು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಕೂಟದ ಅಧ್ಯಕ್ಷೆ ಹರಿಣಾಕ್ಷಿ ಜೆ. ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಒಡಿಯೂರು ಸಾಧ್ವಿ ಶ್ರೀ ಮಾತಾನಂದಮಯೀ ಕಾರ್ಯಕ್ರಮವ್ನನು ಉದ್ಘಾಟಿಸಲಿದ್ದು, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗೌರವ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ, ಸುದಾನ ವಿದ್ಯಾಸಂಸ್ಥೆಯ ಸಂಚಾಲಕ ರೇ ವಿಜಯ ಹಾರ್ವಿನ್, ಅಕ್ಷಯ ವಿದ್ಯಾಸಂಸ್ಥೆಯ ಸಂಚಾಲಕ ಜಯಂತ ನಡುಬೈಲು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ವಿಜಯಲಕ್ಷ್ಮೀ ಪ್ರಸಾದ್ ರೈ, ಕ.ಸಾ.ಪಮ. ಪುತ್ತೂರು ಅಧ್ಯಕ್ಷ ಉಮೇಶ್ ನಾಯಕ್, ಪುತ್ತೂರು ತುಳುಕೂಟದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯಾನ್, ಪೂವರಿ ತುಳು ತಿಂಗಳ ಪತ್ರಿಕೆಯ ಸಂಪಾದಕ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಭಾಗವಹಿಸಲಿದ್ದಾರೆ. ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ದುರ್ಗಾಪ್ರಸಾದ್ ರೈ ಕುಂಬ್ರ ಪ್ರಸ್ತಾವನೆ ಮಾಡಲಿದ್ದಾರೆ ಎಂದು ಅವರು ಹೇಳಿದರು.
ಸನ್ಮಾನ
ನಾಟಿವೈದ್ಯೆ ಕೆಮ್ಮಿಂಜೆ ಗ್ರಾಮದ ಲಕ್ಷ್ಮೀ ಬಳ್ಳಕ್ಕುರಾಯ, ವಿದುಷಿ ನಯನಾ ವಿ. ರೈ ಕುದ್ಕಾಡಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ಪ್ರೇಮಲತಾ ರಾವ್, ಕಲಾವಿದೆ ಅಪರ್ಣಾ ಕೊಡೆಂಕಿರಿ, ಕೃಷಿ ಸಾಧಕಿ ಬಪ್ಪಳಿಗೆ ಪ್ರೇಮಲತಾ ಮಾಧವ ಬಂಗೇರ ಅವರಿಗೆ ಸನ್ಮಾನ ನಡೆಯಲಿದೆ. ಬಳಿಕ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅಧ್ಯಕ್ಷತೆಯಲ್ಲಿ ತುಳು ಕಬಿಕೂಟ ಸೇರಿದಂತೆ ಅಪರಾಹ್ನ ತನಕ ವಿವಿಧ ಕಾರ್ಯಕ್ರಮಗಳನ್ನು ಸಂಯೋಜಿಸಲಾಗಿದೆ ಎಂದು ಎಂದು ಹರಿಣಾಕ್ಷಿ ಜೆ ಶೆಟ್ಟಿ ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ತುಳುಕೂಟದ ಪ್ರಧಾನ ಕಾರ್ಯದರ್ಶಿ ವಿದ್ಯಾಶ್ರೀ ಎಸ್, ಉಪಾಧ್ಯಕ್ಷೆ ಮಲ್ಲಿಕಾ ಜೆ ರೈ, ಪ್ರಮುಖರಾದ ವಸಂತಲಕ್ಷ್ಮೀ ಉಪಸ್ಥಿತರಿದ್ದರು.