ಪುತ್ತೂರು : ಶಾಲೆ ತೊರೆಯೋಣ ಅಭಿಯಾನದಲ್ಲಿ ಪಾಲ್ಗೊಂಡ ಜಿಲ್ಲೆಯ ಅತಿಥಿ ಶಿಕ್ಷಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಶಿಕ್ಷಕರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಅತಿಥಿ ಶಿಕ್ಷಕರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಬೆಳ್ತಂಗಡಿಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಯಾದ ಅತಿಥಿ ಶಿಕ್ಷಕರು ವಿವಿಧ ಬೇಡಿಕೆಗಳಾದ ವೇತನ ಹೆಚ್ಚಳ, ತಿಂಗಳು ತಿಂಗಳು ವೇತನ ಬಿಡುಗಡೆ, ಮೆರಿಟ್ ಪದ್ಧತಿ ಬಿಟ್ಟು ಸುಮಾರು 11ವರ್ಷಗಳಿಂದ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿರುವ ಶಿಕ್ಷಕರನ್ನು ಗುರುತಿಸಿ ಅನುಭವದ ಆಧಾರದಲ್ಲಿ ನೇಮಕಾತಿ ಮಾಡಬೇಕು ಹಾಗೂ ಸೇವಾಭದ್ರತೆ ನೀಡಬೇಕು .,ಖಾಯಂ ನೇಮಕಾತಿ ಹಾಗೂ ವರ್ಗಾವಣೆ ಆಗಿ ಬಂದ ಸಂದರ್ಭದಲ್ಲಿ ಅತಿಥಿ ಶಿಕ್ಷಕರನ್ನು ಕೈ ಬಿಡದೆ ಮುಂದುವರಿಸಬೇಕು ಹಾಗೂ ವರ್ಷದ 12 ತಿಂಗಳು ಕೂಡ ಸಂಬಳ ಬಿಡುಗಡೆ ಮಾಡಬೇಕು.
ವಿವಿಧ ಇಲಾಖೆಗಳಲ್ಲಿ ಅನುಭವದ ಆಧಾರದಲ್ಲಿ ಖಾಯಂ ಮಾಡುವ ಹಾಗೆ ಶಿಕ್ಷಣ ಇಲಾಖೆಯಲ್ಲಿ ಕೂಡ ಅ ನಿಯಮವನ್ನು ಜಾರಿಗೆ ತಂದು ಪದವೀಧರ ಪ್ರತಿಭಾವಂತ ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು.