ಪುತ್ತೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯು ಕರ್ನಾಟಕ ಸರಕಾರದ ಮುಖ್ಯ ಸಚೇತಕರಾದ ಸಲೀಂ ಅಹಮ್ಮದ್ ರವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆ.26ರಂದು ನಡೆಯಿತು.
ಸಭೆಯಲ್ಲಿ ಪಕ್ಷದ ಅಭಿವೃದ್ದಿ ಮತ್ತು ಸರಕಾರದ ಗ್ಯಾರಂಟಿ ಯೋಜನೆಯ ಅನುಷ್ಟಾನದ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್‌ಕುಮಾರ್, ಮಾಜಿ ಸಚಿವ ರಮಾನಾಥ ರೈ, ಜೆ ಆರ್ ಲೋಬೋ, ಮಜಿ ಜಿಲ್ಲಾಧ್ಯಕ್ಷರಾದ ಕೋಡಿಜಾಲ್ ಇಬ್ರಾಹಿಂ ಹಾಜಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಕಾರ್ಯದರ್ಶಿ ಕೃಪಾ ಅಮರ್ ಆಳ್ವ, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್, ಕೆಪಿಸಿಸಿ ಕಾರ್ಯದರ್ಶಿ ಪದ್ಮರಾಜ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಾಹುಲ್ ಹಮೀದ್, ಹಿಂದುಳಿದ ವರ್ಗ ಘಟಕದ ಜಿಲ್ಲಾಧ್ಯಕ್ಷ ವಿಶ್ವಾಸ್‌ಕುಮಾರ್ ದಾಸ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂಡಿಸೋಜಾ, ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ಅಬ್ಬಾಸ್ ಅಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾಶಿವ ಉಳ್ಳಾಲ್, ಡಾ. ಸೆಲ್ ಜಿಲ್ಲಾಧ್ಯಕ್ಷ ಶೇಖರ ಪೂಜಾರಿ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಜಿಲ್ಲಾ ಉಪಾಧ್ಯಕ್ಷರುಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಅಧ್ಯಕ್ಷರುಗಳು ಸೇರಿದಂತೆ ವಿವಿಧ ಘಕದ ಸದಸ್ಯರು ಉಪಸ್ಥಿತರಿದ್ದರು.