ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ವಿಟ್ಲ: ಕೊಲೆ ಯತ್ನ,ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ಜಿಲ್ಲೆಯ ಬಹುತೇಕ ಠಾಣೆಗಳಲ್ಲಿ ಆರೋಪಿಯಾಗಿದ್ದು, ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್.ಐ.ರಾಮಕೃಷ್ಣರವರ ನೇತ್ರತ್ವದ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.


ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಇಬ್ರಾಹಿಂ ಅವರ ಮಗ ಉಮ್ಮರ್ ಫಾರೂಕ್ ಬಂಧಿತ ಆರೋಪಿ. ಸುಮಾರು 17 ಪ್ರಕರಣಗಳಲ್ಲಿ ಉಮ್ಮರ್ ಫಾರೂಕ್ ಅವರು ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಉಮ್ಮಾರ್ ಫಾರುಕ್ ರವರ ವಿರುದ್ಧ ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ, ಬಜಪೆ,ಕೋಣಾಜೆ,ಬರ್ಕೆ,ವಿಟ್ಲ,ಕಡಬ ಹೀಗೆ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಹಲವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಆ.26ರಂದು ಬೆಳಿಗ್ಗೆ ಆರೋಪಿ ಮಾಣಿ ಪರಿಸರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾದರು. ಬಂಟ್ವಾಳ ನಗರ ಠಾ಼ಣಾ ಎಸ್.ಐ.ರಾಮಕೃಷ್ಣ ನೇತ್ರತ್ವದಲ್ಲಿ ಪೋಲೀಸ್ ಸಿಬ್ಬಂದಿಗಳಾದ ಗಣೇಶ್,ಮೋಹನ್ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here