ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ, ವಿಜ್ಞಾಪನಾ ಪತ್ರ ಬಿಡುಗಡೆ

0

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಆ.25ರಂದು ರಾತ್ರಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ನಡೆಯಿತು.

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಒಳಾಂಗಣಕ್ಕೆ ಕಲ್ಲು ಹಾಸುವ ಕಾರ್ಯ, ಮುಂಭಾಗದ ಗೋಪುರ ನಿರ್ಮಾಣ, ಮೇಲ್ಛಾವಣಿ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ದೇಣಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು.
ಈ ವೇಳೆ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ಆಶೀರ್ವಚನ ನೀಡಿ ದೇವರಲ್ಲಿ ನಿಷ್ಕಲ್ಮಶ ಭಕ್ತಿಯಿದ್ದಾಗ ಬದುಕಿನ ಯಾವುದೇ ಒಂದು ಸನ್ನಿವೇಶದಲ್ಲಿ ಯಶಸ್ಸು ಪಡೆಯಲು ಸಾಧ್ಯ. ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಬ್ರಹ್ಮಕಲಶೋತ್ಸವ ನಡೆದ ಬಳಿಕ ಪುಷ್ಕರಣಿ ಅಭಿವೃದ್ಧಿ ನಡೆದಿದೆ. ಮುಂದಿನ ಅವಶ್ಯಕ ಅಭಿವೃದ್ಧಿ ಕಾರ್ಯಗಳಿಗೆ ಭಕ್ತರ ಸಹಕಾರ ಅತ್ಯಗತ್ಯ ಎಂದರು.
ಶ್ರೀ ಚಾಮುಂಡೇಶ್ವರಿ ದೇವಿ ಟ್ರಸ್ಟ್ ಅಧ್ಯಕ್ಷ ಪದ್ಮನಾಭ ಪೂಜಾರಿ ಅಳಿಕೆ ರವರು ಮಾತನಾಡಿ ಶ್ರೀ ಕ್ಷೇತ್ರದಲ್ಲಿ ತಮ್ಮ ಇಷ್ಟಾರ್ಥಗಳನ್ನು ಬೇಡುವ ಆ‌ಸ್ತಿಕರಿಗೆ ದೇವಿ ಸದಾ ಶ್ರೀರಕ್ಷೆಯಾಗಿದ್ದಾಳೆ. ಊರಪರವೂರ ಭಕ್ತರು ನೀಡುವ ಯಥಾನುಶಕ್ತಿಯ ಸಹಕಾರ ಅರ್ಥಪೂರ್ಣ ಸೇವೆಯಾಗುವುದು ಎಂದು ತಿಳಿಸಿದರು.
ಅರ್ಚಕ ಗಣೇಶ್ ಭಟ್, ಈಶ್ವರ ಭಟ್ ಕಣಿಯೂರು ನೇತೃತ್ವದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜೆ ನಡೆಯಿತು.
ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಕಣಿಯೂರು ನಾಗರಾಜ ಕಣಿಯೂರು, ನವೀನ್, ದೀಕ್ಷಿತ್ ಕಣಿಯೂರು ಸಹಕರಿಸಿದರು.

LEAVE A REPLY

Please enter your comment!
Please enter your name here