ಬಲ್ಯ: ಕಾರು, ಬೈಕ್ ಡಿಕ್ಕಿ-ಬೈಕ್ ಸವಾರನಿಗೆ ಗಾಯ

0

ಕಡಬ: ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಆ.25ರಂದು ಬೆಳಿಗ್ಗೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಬಲ್ಯದಲ್ಲಿ ನಡೆದಿದೆ.


ಗಾಯಗೊಂಡಿರುವ ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಭಾಸ್ಕರ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದು ಬಲ್ಯ ಕ್ರಾಸ್ ತಲುಪಿದಾಗ ಕಡಬ ಕಡೆಯಿಂದ ಬಂದ ಕಾರನ್ನು ಅದರ ಚಾಲಕ ಯಾವುದೇ ಸೂಚನೆ ನೀಡದೇ ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ನೆಲ್ಯಾಡಿ ಕಡೆಗೆ ತಿರುಗಿಸಿದಾಗ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಬೈಕ್ ಸವಾರ ಭಾಸ್ಕರ ಅವರು ಬೈಕ್ ಸಮೇತ ರಸ್ತೆಯ ಎಡ ಬದಿಯ ಚರಂಡಿಗೆ ಬಿದ್ದು ಗಾಯಗೊಂಡಿದ್ದರು. ಗಾಯಾಳುವನ್ನು 108 ಆಂಬುಲೆನ್ಸ್‌ನಲ್ಲಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ, ಅಲ್ಲಿನ ವೈದ್ಯರು ತಿಳಿಸಿದಂತೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಪಡೆದುಕೊಂಡ ಬಳಿಕ ಬೆಳ್ತಂಗಡಿಯ ಎಸ್‌ಡಿಎಮ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here