ಆ.29: ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಫಿಲೋಮಿನಾ ಕಾಲೇಜಿನಲ್ಲಿ ಕೆನಡದಲ್ಲಿ ನಡೆಯಲಿರುವ ಕಾಮನ್ ವೆಲ್ತ್ ಕ್ರೀಡಾಪಟುಗಳಿಗೆ ಸನ್ಮಾನ

0

ಪುತ್ತೂರು: ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 29 ರಂದು ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆಯು ವಹಿಸುವ ಮಹತ್ತರವಾದ ಪಾತ್ರದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ಈ ನಿಟ್ಟಿನಲ್ಲಿ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ.

ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್, ಕಾಲೇಜಿನ ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊ, ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋರವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕೆನಡದಲ್ಲಿ ನಡೆಯಲಿರುವ ಕಾಮನ್ ವೆಲ್ತ್ ಲೈಫ್ ಸೇವಿಂಗ್ ಚಾಂಪಿಯನ್ ಶಿಪ್-2023 ಇದರಲ್ಲಿ ಭಾಗವಹಿಸಲಿರುವ ಕಾಲೇಜಿನ ವಿದ್ಯಾರ್ಥಿ ತ್ರಿಶೂಲ್ ಗೌಡ, ಹಿರಿಯ ವಿದ್ಯಾರ್ಥಿಗಳಾದ ಸ್ವೀಕೃತ್ ಆನಂದ್, ನೀಲ್ ಮಸ್ಕರೇನ್ಹಸ್, ಧನ್ವಿತ್ ರವರುಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊ, ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here