ಅಲ್ಪಸಂಖ್ಯಾತ ಇಲಾಖೆಯ ಸವಲತ್ತುಗಳ ಮಾಹಿತಿ ಕಾರ್ಯಾಗಾರ
ಪುತ್ತೂರು: ಅಲ್ಪಸಂಖ್ಯಾತರಿಗೆ ರಾಜ್ಯ ಸರಕಾರ ನೀಡುವ ಸವಲತ್ತುಗಳ ಮಾಹಿತಿಯ ಕೊರತೆಯಿದೆ, ಯಾವುದೇ ಸವಲತ್ತು, ಯೋಜನೆಗಳನ್ನು ನಾವು ಅನುಭವಿಸಬೇಕಾದರೆ ಅದರ ಪೂರ್ಣ ಮಾಹಿತಿ ತಿಳಿದುಕೊಳ್ಳುವುದು ಅನಿವಾರ್ಯ, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸರ್ವೆ ಘಟಕ ಹಮ್ಮಿಕೊಂಡ ಮಾಹಿತಿ ಕಾರ್ಯಕ್ರಮ ಅರ್ಥಪೂರ್ಣ ಮತ್ತು ಶ್ಲಾಘನೀಯ, ರಾಜ್ಯ ರಾಜಕೀಯ ವಲಯಕ್ಕೆ ಇದು ಮಾದರಿಯಾಗಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಹೇಳಿದರು.
ಅವರು ಸರ್ವೆ ವಲಯ ಕಾಂಗ್ರೆಸ್ ವತಿಯಿಂದ ನಡೆದ ನೂತನ ಸಮಿತಿಯ ಪದಗ್ರಹಣ ಹಾಗೂ ಅಲ್ಪಸಂಖ್ಯಾತರ ಯೋಜನೆಗಳ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ತರಬೇತುದಾರರಾಗಿ ಮಾತನಾಡಿದರು.
ಮುಂದಕ್ಕೆ ಲೋಕಸಭಾ ಚುನಾವಣೆ ನಡೆಯಲಿದ್ದು ಸಂಘಟಿತರಾಗಿ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಬೇಕು, ಅಲ್ಪಸಂಖ್ಯಾತರ ಮತ ವಿಭಜನೆಯಾಗದಂತೆ ಎಚ್ಚರಿಕೆ ವಹಿಸಬೇಕು, ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳ ಸಂಪೂರ್ಣ ಮಾಹಿತಿ ಜನಸಾಮಾನ್ಯರಿಗೆ ತಲುಪಿಸುವಂತಾಗಬೇಕು, ಅಲ್ಪಸಂಖ್ಯಾತರ ಯೋಜನೆಗಳನ್ನು ಸಮಗ್ರವಾಗಿ ಪಡೆದುಕೊಳ್ಳಲು ನಾವು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಸಭೆಯನ್ನು ಸರ್ವೆ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್ ಡಿ. ವಸಂತ ಉದ್ಘಾಟಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ.ಎಚ್ ಅಬ್ದುಲ್ ಶಕೂರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಮುಖಂಡ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ಮಾತನಾಡಿ ಸಂಘಟನೆಗಳು ಬೆಳೆದು ಬರುವಾಗ ಚುಚ್ಚು ಮಾತುಗಳು, ಅಡ್ಡಗಾಲು ಹಾಕಲು ಪ್ರಯತ್ನಿಸೋದು ಇದೆಲ್ಲಾ ಸಹಜ, ಅದಕ್ಕೆಲ್ಲಾ ಅಧ್ಯಕ್ಷ-ಪದಾಧಿಕಾರಿಗಳು ಅಥವಾ ಸದಸ್ಯರು ಎದೆಗುಂದುವ ಅಗತ್ಯವಿಲ್ಲ, ಸಮಾಜಮುಖಿ ಕಾರ್ಯಕ್ರಮ ಮತ್ತು ನಿಸ್ವಾರ್ಥ ಸೇವೆಗಳ ಮೂಲಕ ನೂತನ ಅಲ್ಪಸಂಖ್ಯಾತ ಸರ್ವೆ ಘಟಕ ಮುಂದೆ ಸಾಗಲಿ ಎಂದು ಶುಭ ಹಾರೈಸಿದರು.
ನೂತನವಾಗಿ ಆಯ್ಕೆಗೊಂಡ ಸರ್ವೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮ್ಮದ್ ಅಲಿ ನೇರೋಳ್ತಡ್ಕ ಮತ್ತು ಪದಾಧಿಕಾರಿಗಳು, ಸದಸ್ಯರನ್ನು ಶಾಲು ಹಾಕಿ ಸನ್ಮಾನಿಸಲಾಯಿತು.
ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕ ಪ್ರಧಾನ ಕಾರ್ಯದರ್ಶಿ ಶರೀಫ್ ಕೊಯಿಲ, ಸರ್ವೆ ವಲಯ ಉಸ್ತುವಾರಿ ರಾಮಚಂದ್ರ ಸೊರಕೆ, ಮುಂಡೂರು ಗ್ರಾ.ಪಂ ಸದಸ್ಯ ಕಮಲೇಶ್ ಸರ್ವೆದೋಳಗುತ್ತು, ಸರ್ವೆ ಬೂತ್ 193 ಅಧ್ಯಕ್ಷ ಯತೀಶ್ ರೈ, ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷ ಸಿದ್ದೀಕ್ ಸುಲ್ತಾನ್, ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕ ಸಂಘಟನಾ ಕಾರ್ಯದರ್ಶಿ ಜೆ.ಎಸ್ ಜೈನುದ್ದೀನ್, ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷ ಅಝೀಝ್ ರೆಂಜಲಾಡಿ ಉಪಸ್ಥಿತರಿದ್ದರು. ಸರ್ವೆ ಬೂತ್ ಅಧ್ಯಕ್ಷ ಮಜೀದ್ ಬಾಳಾಯ ಸ್ವಾಗತಿಸಿದರು. ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಎಸ್.ಎಂ ಶರೀಫ್ ಸರ್ವೆ ವಂದಿಸಿದರು.