ಕರಾಟೆ- ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ಸಾಧನೆ-ವಿದ್ಯಾರ್ಥಿನಿ ಸಮೀಕ್ಷ ರಾಷ್ಟ್ರಮಟ್ಟಕ್ಕೆ

0

ಪುತ್ತೂರು: ಪುಣಚದ ಶ್ರೀದೇವಿ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಪಂದ್ಯಾಟದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಮೀಕ್ಷ ಪ್ರಥಮ ಸ್ಥಾನವನ್ನು ಪಡೆದು ಅಕ್ಟೋಬರ್ 28 ರಿಂದ 30ರವರೆಗೆ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಪುಣಚದ ಶ್ರೀದೇವಿ ವಿದ್ಯಾ ಸಂಸ್ಥೆಯಲ್ಲಿ ಆ.26 ರಂದು ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೋಕ್ಷಿತಾ,ಶಿವಕುಮಾರ್,ದ್ವಿತೀಯ ವಿಜ್ಞಾನ ವಿಭಾಗದ ನಿಶಾಂತ್ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶ್ರಾವ್ಯ ತೃತೀಯ ಸ್ಥಾನವನ್ನು ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here