ನೆಲ್ಯಾಡಿ: ಶ್ರೀರಾಮ ಶಾಲೆಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

0

ನೆಲ್ಯಾಡಿ: ನೆಲ್ಯಾಡಿ ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶುಮಂದಿರ, ಚಾಮುಂಡೇಶ್ವರಿ ಭಜನಾ ಮಂಡಳಿ ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಅನಂತ ಪದ್ಮನಾಭ ನೂಜಿನ್ನಾಯರವರ ಪೌರೋಹಿತ್ಯದಲ್ಲಿ 14ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭೆ ಆ.೨೫ರಂದು ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ನಡೆಯಿತು.


ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಪುತ್ತೂರು ವಿದ್ಯಾಸರಸ್ವತಿ ಶಿಶುಮಂದಿರದ ಆಡಳಿತ ಸಮಿತಿ ಸದಸ್ಯೆ ಪವಿತ್ರಾವಿಜಯ ಕೆ.,ರವರು, ರಾಮನ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ಜಾತಿ ಭೇದಗಳಿಲ್ಲದೆ ರಕ್ಷೆಯಲ್ಲಿರುವ ನೂಲಿನಂತೆ ಒಗಟ್ಟಿನಿಂದ ಜೀವಿಸಬೇಕೆಂದು ಕರೆ ನೀಡಿದರು. ಮುಖ್ಯ ಅಥಿತಿಯಾಗಿದ್ದ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ನಿವೃತ್ತ ಪ್ರಾಂಶುಪಾಲರಾದ ಕೆ.ಎಸ್. ಮೀನಾಕ್ಷಿಯವರು ಶುಭ ಹಾರೈಸಿದರು. ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಪ್ರತಿಮಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸುಪ್ರೀತಾ ರವಿಚಂದ್ರ ಹೊಸವಕ್ಲುರವರು ಸ್ವಾಗತಿಸಿ, ಪ್ರತಿಮಾ ವಂದಿಸಿದರು. ಭಾಗೀರಥಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಮಂಗಳಾರತಿ ನಡೆದು ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here