ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ಇವರ ಆಶ್ರಯದಲ್ಲಿ ಗೋಳಿತ್ತೊಟ್ಟು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ಸಂರಕ್ಷಣೆ ಮತ್ತು ಗಿಡನಾಟಿ ಕಾರ್ಯಕ್ರಮ ಆ.24ರಂದು ನಡೆಯಿತು.
ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿ, ಗಿಡ ವಿತರಿಸಿ, ಶಾಲೆಯ ಪರಿಸರದಲ್ಲಿ ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಕಡಬ ತಾಲೂಕು ಕೃಷಿ ಮೇಲ್ವಿಚಾರಕ ಸೋಮಯ್ಯರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಜಯಂತಿ ಬಿ.ಎಂ ಉದ್ಘಾಟಿಸಿದರು. ಶಿಕ್ಷಕಿ ತೇಜಸ್ವಿ ಕೆ.ರವರು ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಗ್ರಾಮಾಭಿವೃದ್ಧಿ ಯೋಜನೆಯ ಗೋಳಿತ್ತೊಟ್ಟು ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಅಲೆಕ್ಕಿ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ ಗೌಡ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಸುಜಾತ ಸ್ವಾಗತಿಸಿದರು. ಸೇವಾನಿರತರಾದ ನೇಮಿರಾಜ ಕಲಾಯಿ ವಂದಿಸಿದರು. ಯೋಜನೆಯ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಶಿಕ್ಷಕ ಅಬ್ದುಲ್ ಲತೀಫ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಾನ್ ಕೆ.ಪಿ ಮತ್ತು ಗೌರವ ಶಿಕ್ಷಕಿ ಯಶಸ್ವಿನಿ ಜಿ.ಕೆ ಸಹಕರಿಸಿದರು.