ನೆಲ್ಯಾಡಿ: ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ-2023ರ ಅಂಗವಾಗಿ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಸಿರಿಧಾನ್ಯಗಳಿಂದ ತಯಾರಿಸಿದ ವಿವಿಧ ಖಾದ್ಯಗಳ ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.
ಶಾಲೆಯ ಮಕ್ಕಳು ತಮ್ಮ ಮನೆಯಲ್ಲಿ ಸಿರಿಧಾನ್ಯಗಳಿಂದ ತಯಾರಿಸಲಾದ ವಿವಿಧ ಖಾದ್ಯಗಳಾದ ನವಣೆ, ಸಜ್ಜೆ, ಫಲಾವ್, ರೊಟ್ಟಿ, ರಾಗಿರೊಟ್ಟಿ, ರಾಗಿ ತಂಬುಲಿ, ಸೇಮೆ ಪಾಯಸ, ಮಿಲ್ಕ್ ಕೇಕ್,ಬಾರ್ಲಿ,ಗೋಧಿ,ಮೆಕ್ಕೆಜೋಳ ಸೇರಿದಂತೆ ಇನ್ನಿತರ ಖಾದ್ಯಗಳನ್ನು ಪ್ರದರ್ಶಿಸಿದರು. ಮುಖ್ಯಗುರು ವಿದ್ಯಾ ಕೆ.ಅವರು ಸಿರಿಧಾನ್ಯಗಳ ಬಳಕೆ ಹಾಗೂ ಪೌಷ್ಠಿಕತೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಸಹಶಿಕ್ಷಕಿ ಮಾಲತಿ ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕಿಯರಾದ ಚಿತ್ರಾವತಿ, ಪವಿತ್ರ ಸಹಕರಿಸಿದರು. ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.