ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ತಾ.ಮಟ್ಟದ ವಾಲಿಬಾಲ್ ಪಡುಬೆಟ್ಟು ಶಾಲಾ ಬಾಲಕಿಯರ ತಂಡ ಪ್ರಥಮ

0

ನೆಲ್ಯಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಹಾಗೂ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲಾ ಮುಖ್ಯಗುರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಪೂರ್ವ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಪ್ರೋತ್ಸಾಹದೊಂದಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಲೀಲಾವತಿ ಎಂ.,ರವರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here