ಕಡಬ: ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14ರ ವಯೋಮಾನದ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾಲಯ ಪ್ರೌಢಶಾಲೆಗೆ ಪ್ರಶಸ್ತಿ

0

ಕಡಬ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಯೋಜಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ದೀಪ್ತಿ 8ನೇ ತರಗತಿ ಭಾಗವಹಿಸಿ ಚತುರ್ಥ ಸ್ಥಾನವನ್ನು ಪಡೆದು ಆ.18 ರಂದು ಬೆಳಗಾವಿಯಲ್ಲಿ ನಡೆದ ಪ್ರಾಂತೀಯ (ರಾಜ್ಯ) ಕ್ರೀಡಾ ಕೂಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾಳೆ. ಚಿಂತನ್ ಕೆ 8ನೇ ತರಗತಿ 14ರ ವಯೋಮಾನದ ಬಾಲಕರ ಯೋಗಾಸನ ರಿದಮಿಕ್ ವಿಭಾಗದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸೈಂಟ್ ಮೀರಾ ಇಂಗ್ಲಿಷ್ ಮೀಡಿಯಂ ಶಾಲೆ ಬೆಳಗಾವಿಯಲ್ಲಿ ಆ.18ರಂದು ನಡೆದ ಪ್ರಾಂತೀಯ ಮಟ್ಟದ ರಿದಮಿಕ್ ಯೋಗಾಸನದಲ್ಲಿ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ತರಬೇತುದಾರರಾಗಿ ಸಂಸ್ಥೆಯ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ ಮತ್ತು ಜಲಜಾಕ್ಷಿ ಬಿ ವಿ ಇವರು ಮಾರ್ಗದರ್ಶನ ನೀಡಿರುತ್ತಾರೆ.

LEAVE A REPLY

Please enter your comment!
Please enter your name here