ಕಬಕ ಪ.ಪೂ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ವಿಜೇತಾ ವಿ ಬಿ ಯವರ ಬೀಳ್ಕೊಡುಗೆ ಸಮಾರಂಭ

0

ಕಬಕ: ಇಲ್ಲಿನ ಸ.ಪ.ಪೂ.ಕಾಲೇಜಿನಲ್ಲಿ ಕಳೆದ 10 ವರ್ಷಗಳಿಂದ ರಸಾಯನಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜೇತಾ ವಿ ಬಿ ಮೈಸೂರಿನ ಹುಣಸೂರು ಬಾಲಕರ ಸ.ಪ.ಪೂ.ಕಾಲೇಜಿಗೆ ವರ್ಗಾವಣೆಗೊಂಡಿದ್ದಾರೆ.

ಆ ಪ್ರಯುಕ್ತ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಆ.28ರಂದು ಏರ್ಪಡಿಸಲಾಯಿತು.ಈ ಸಂದರ್ಭದಲ್ಲಿ ಶಾಲು, ಸ್ಮರಣಿಕೆ, ಫಲಪುಷ್ಪ, ಹಾರ ಹಾಕಿ ಸನ್ಮಾನಿಸಲಾಯಿತು.

" alt="" width="300" height="450" />


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಶ್ರೀಧರ ರೈ ಕೆ ವಹಿಸಿದ್ದರು. ಕಾಲೇಜು ಅಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷ ಶಾಬಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಸಂಸ್ಥೆಯ ಉಪನ್ಯಾಸಕರು ,ವಿದ್ಯಾರ್ಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು.ಸ್ವಾತಿ ಸ್ವಾಗತಿಸಿ,ಕವನರವರು ವಿಜೇತಾರನ್ನು ಪರಿಚಯಿಸಿ,ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿ,ಅಶ್ವಿತಾ ವಂದಿಸಿದರು.

LEAVE A REPLY

Please enter your comment!
Please enter your name here