ಕಡಬ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕಾಧಿಕಾರಿಯಾಗಿ ಭವಾನಿಶಂಕರ್

0

ಸುಬ್ರಹ್ಮಣ್ಯ: ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಯಾಗಿ ಭವಾನಿಶಂಕರ್ ಎನ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಭವಾನಿ ಶಂಕರ್ ಅವರು ಸುಳ್ಯತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ವರ್ಗಾವಣೆಯಾಗಿ ಸುಳ್ಯಕ್ಕೆ ಬಂಟ್ವಾಳ ತಾಲೂಕು ಕಾರ್ಯನಿರ್ವಾಹಕಾಧಿಕಾರಿಯಾಗಿದ್ದ ರಾಜಣ್ಣ ಅವರು ಆಗಮಿಸಿದ್ದರು. ಆದರೆ ಭವಾನಿ ಶಂಕರ್ ಅವರಿಗೆ ಸ್ಥಳ ಕಾಣಿಸಿರಲಿಲ್ಲ.ಇದೀಗ ಭವಾನಿ ಶಂಕರ್ ಅವರನ್ನು ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಯಾಗಿ ನೇಮಿಸಲಾಗಿದೆ.ಪ್ರಸ್ತುತ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಯಾಗಿ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ನವೀನ್ ಭಂಡಾರಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

LEAVE A REPLY

Please enter your comment!
Please enter your name here