ಪುತ್ತೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ಕೊಂಬೆಟ್ಟು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಪುತ್ತೂರು ಮತ್ತು ಕಡಬ ತಾಲೂಕಿನ ಕನ್ನಡ ಮತ್ತು ಆಂಗ್ಲ ಭಾಷಾ ಶಿಕ್ಷಕರ ಸಮಾಲೋಚನಾ ಕಾರ್ಯಾಗಾರ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಜೋಕಿಂ ಡಿಸೋಜಾ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪಪ್ರಾಂಶುಪಾಲ ವಸಂತ ಮೂಲ್ಯ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಪುತ್ತೂರು ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ, ಕಡಬ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ, ರಾಪ್ಟ್ರೀಯ ಪ್ರಶಸ್ತಿ ಪುರಸ್ಕೃತ ಸೇರ ಕೋಟಿಯಪ್ಪ ಪೂಜಾರಿ, ಎಸ್.ಡಿ.ಎಂ.ಸಿ ಸದಸ್ಯ ಜಯಪ್ರಕಾಶ್ ಹಾಗೂ ಸಂಪನ್ಮೂಲ ವ್ಯಕ್ತಿಗಳು ಉಪಸ್ಥತರಿದ್ದರು.
ಉಪಪ್ರಾಂಶುಪಾಲರು ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿ ಶಿಕ್ಷಕಿ ಸ್ಮಿತಾ ಕೆ.ಎನ್ ವಂದಿಸಿದರು. ನಂತರ ಕಡಬ ಹಾಗೂ ಪುತ್ತೂರು ತಾಲೂಕಿನ 160 ಕನ್ನಡ ಮತ್ತು ಆಂಗ್ಲ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.