ಪುತ್ತೂರು:ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಗಸ್ಟ್ 29ರಂದು ಆಚರಿಸಲಾಯಿತು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ಸೀತಾರಾಮ ಗೌಡ ಎ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಮಾತನಾಡಿ ನಾವು ದಿನನಿತ್ಯ ಆಟವನ್ನು ವ್ಯಾಯಾಮವನ್ನು ಮಾಡಬೇಕು. ಆಗ ನಾವು ಲವಲವಿಕೆಯಿಂದ ಇರಲು ಸಾಧ್ಯ. ಒಬ್ಬ ವ್ಯಕ್ತಿ ಒಂದು ವಿಷಯವನ್ನು ಆಯ್ಕೆ ಮಾಡಿ ನಿರಂತರ ಅದರಲ್ಲಿ ಪ್ರಯತ್ನವನ್ನು ಮಾಡಿ ಸಾಧನೆ ಮಡಬೇಕೆಂದು ತಿಳಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ ಕ್ರೀಡಾ ದಿನದ ಮಹತ್ವವನ್ನು ಸವಿಸ್ತಾರವಾಗಿ ತಿಳಿಸಿಕೊಟ್ಟರು. ಮೇಜರ್ ಧ್ಯಾನ್ಚಂದ್ ರಾಷ್ಟ್ರೀಯ ಹಾಕಿ ಕ್ರೀಡಾಪಟು ಇವರ ಜನ್ಮ ಜಯಂತಿಯನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ನುಡಿದರು.
ಸಭಾ ಕಾರ್ಯಕ್ರಮದ ನಂತರ ಮೈದಾನದಲ್ಲಿ ಶಿಕ್ಷಕರು ವಿವಿಧ ಆಟಗಳನ್ನು ವಿದ್ಯಾರ್ಥಿಗಳಿಗೆ ಆಡಿಸುವುದರ ಮೂಲಕ ಅವುಗಳ ಮಹತ್ವವನ್ನು ತಿಳಿಸಿಕೊಡಲಾಯಿತು.
ಆಂಗ್ಲಮಾಧ್ಯಮ ವಿಭಾಗದ ವಿದ್ಯಾರ್ಥಿಗಳಾದ ನಿಧಿ, ಜಾನ್ವಿ, ಪ್ರಣಮ್ಯ ಪ್ರಾರ್ಥಿಸಿ, ಆಂಗ್ಲಮಾಧ್ಯಮ ವಿಭಾಗದ ಮುಖ್ಯಸ್ಥೆ ಭವ್ಯಶ್ರೀ ಕೆ ಸ್ವಾಗತಿಸಿ, ಪ್ರೌಢವಿಭಾಗದ ಮುಖ್ಯಗುರು ಶೈಲಶ್ರೀ ರೈ ಎಸ್ ವಂದಿಸಿ, ಆಂಗ್ಲಮಾಧ್ಯಮದ ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು.