ಕಾಣಿಯೂರು ಗ್ರಾ.ಪಂ.ನಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ

0

ಕಾಣಿಯೂರು: ಕಾಣಿಯೂರು ಗ್ರಾ.ಪಂ.ವತಿಯಿಂದ ದ.ಕ.ಜಿ.ಪಂ., ಕಡಬ ತಾ.ಪಂ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಸರಕಾರ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ ಕಾಣಿಯೂರು ಗ್ರಾ. ಪಂ. ಸಭಾಭವನದಲ್ಲಿ ಆ.30ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ ಕೊಪ್ಪ, ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಸದಸ್ಯರಾದ ಗಣೇಶ್ ಉದನಡ್ಕ, ವಸಂತ ಪೆರ್ಲೋಡಿ, ದೇವಿಪ್ರಸಾದ್ ದೋಳ್ಪಾಡಿ, ಲೋಕಯ್ಯ ಪರವ ದೋಳ್ಪಾಡಿ, ತಾರಾನಾಥ ಇಡ್ಯಡ್ಕ, ರಾಮಣ್ಣ ಗೌಡ ಮುಗರಂಜ, ಲಲಿತಾ ದರ್ಖಾಸು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವರಾಜ್, ಸಿಬ್ಬಂದಿಗಳಾದ ತಿಮ್ಮಪ್ಪ ಗೌಡ ಬೀರುಕುಡಿಕೆ, ಕುಮಾರ್, ಚಿತ್ರಾ, ಕೀರ್ತಿ ಕುಮಾರ್, ಪಾರ್ವತಿ ಹಾಗೂ ಫಲಾನುಭವಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here