ನೂರಾರು ಮಹಿಳೆಯರು ಭಾಗಿ – ನೇರ ಪ್ರಸಾರ ವೀಕ್ಷಣೆ
ಪುತ್ತೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮುಂಡೂರು ಗ್ರಾ.ಪಂ ಸಹಯೋಗದಲ್ಲಿ ಆ.30ರಂದು ಮುಂಡೂರು ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಎನ್‌ಎಸ್‌ಡಿ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರಕಾರದ ಐದು ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದ್ದು ಈ ಯೋಜನೆ ಮೂಲಕ ಕುಟುಂಬದ ಮಹಿಳೆಗೆ ತಿಂಗಳಿಗೆ ರೂ.2000 ಹಣ ಸಿಗಲಿದೆ, ಸರಕಾರದ ವತಿಯಿಂದ ಚಾಲನೆ ಆದ ಬಳಿಕ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಸಭಾಭವನದಲ್ಲಿ ಗಮನ ಸೆಳೆಯುತ್ತಿದ್ದ ರಂಗೋಲಿ ಬಿಡಿಸಿದ್ದ ಮನೋಜ್ ಸುವರ್ಣ ಸೊರಕೆ ಅವರನ್ನು ಗ್ರಾ.ಪಂ ವತಿಯಿಂದ ಅಧ್ಯಕ್ಷ ಚಂದ್ರಶೇಖರ್ ಎನ್‌ಎಸ್‌ಡಿ ಅವರು ಸನ್ಮಾನಿಸಿ ಗೌರವಿಸಿದರು. ಗ್ರಾ.ಪಂ ಕಾರ್ಯದರ್ಶಿ ಸೂರಪ್ಪ, ಗ್ರಾ.ಪಂ ಉಪಾಧ್ಯಕ್ಷೆ ಯಶೋಧ, ಸದಸ್ಯರಾದ ಕಮಲೇಶ್ ಸರ್ವೆದೋಳಗುತ್ತು, ಮಹಮ್ಮದ್ ಆಲಿ, ಉಮೇಶ್ ಗೌಡ ಅಂಬಟ, ರಸಿಕಾ ರೈ ಮೇಗಿನಗುತ್ತು, ದೀಪಿಕಾ ಕಲ್ಲಗುಡ್ಡೆ, ಕಾವ್ಯ ಕಡ್ಯ, ಸುನಂದ, ವಿಜಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಮುಂಡೂರು ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಯಾಕೂಬ್ ಮುಲಾರ್, ನಿರ್ದೇಶಕ ಶಿವನಾಥ ರೈ ಮೇಗಿನಗುತ್ತು, ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕುರೆಮಜಲು, ಮಾಜಿ ಉಪಾಧ್ಯಕ್ಷ ಇಬ್ರಾಹಿಂ ಮುಲಾರ್, ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸುಪ್ರೀತ್, ಪ್ರಮುಖರಾದ ಗಣೇಶ್ ಕೊರುಂಗು, ಅಶೋಕ್ ಎಸ್.ಡಿ, ಪ್ರವೀಣ್ ಆಚಾರ್ಯ, ಮಜೀದ್ ಬಾಲಾಯ, ಶಶಿಧರ್ ಎಸ್.ಡಿ, ಮನೋಜ್ ಸುವರ್ಣ ಹಾಗೂ ನೂರಾರು ಮಹಿಳೆಯರು ಉಪಸ್ಥಿತರಿದ್ದು, ಬೃಹತ್ ಎಲ್‌ಇಡಿ ಪರದೆ ಮೂಲಕ ಗೃಹಲಕ್ಷ್ಮಿ ಯೋಜನೆ ಚಾಲನೆಯ ನೇರಪ್ರಸಾರ ವೀಕ್ಷಿಸಿದರು. ಗ್ರಾ.ಪಂ ಸಿಬ್ಬಂದಿ ಶಶಿಧರ ಕೆ ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳಾದ ಕೊರಗಪ್ಪ, ಸತೀಶ, ಕವಿತಾ, ಮೋಕ್ಷಾ ಸಹಕರಿಸಿದರು.