ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ-ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಸಮಗ್ರ ಪ್ರಶಸ್ತಿಯೊಂದಿಗೆ ವಿಭಾಗ ಮಟ್ಟಕ್ಕೆ ಆಯ್ಕೆ

0

ಕಾಣಿಯೂರು: ಎಸ್ ಡಿ ಎಂ ಉಜಿರೆಯಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಮೋನಿಶ್ ತಂಟೆಪ್ಪಾಡಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಶ್ರೀಮಾ ಕೆ ಎಚ್ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಪ್ರಾಥಮಿಕ ಆರ್ಟಿಸ್ಟಿಕ್ ವಿಭಾಗದಲ್ಲಿ ಸಾನ್ವಿಕ ಎಚ್ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮೋನಿಶ್ ತಂಟೆಪ್ಪಾಡಿ ಯೋಗಕುಮಾರ ಪ್ರಶಸ್ತಿಯನ್ನು ಹಾಗೂ ಶ್ರೀಮಾ ಕೆ ಎಚ್ ಯೋಗ ಕುಮಾರಿ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಮತ್ತು ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.


ಇವರನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ , ಶಾಲಾ ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.
ಇವರಿಗೆ ಸಂಸ್ಥೆಯ ಯೋಗ ಶಿಕ್ಷಕಿ ಶ್ರೀಮತಿ ಶಶಿಕಲಾ ತರಬೇತಿ ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ಸಹಕರಿಸಿದರು.

LEAVE A REPLY

Please enter your comment!
Please enter your name here