ಅರಿಯಡ್ಕ: ತಾ.ಮಟ್ಟದ ಜನಪದ ನೃತ್ಯ, ಪಾತ್ರಾಭಿನಯ ಸ್ಪರ್ಧೆ – ಪಾಪೆಮಜಲು ಪ್ರೌಢಶಾಲಾ ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ರಾಷ್ಟ್ರೀಯ ಜನಸಂಖ್ಯೆಯ ಯೋಜನೆಯಡಿ ಜನಪದ ನೃತ್ಯ ಮತ್ತು ಪಾತ್ರಾಭಿನಯ ಸ್ಪರ್ಧೆ ನಡೆಯಿತು. ಯುವ ಉದ್ಯಮಿ ಅಶೋಕ್ ಶೆಟ್ಟಿ ಹೊಸಗದ್ದೆ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಅಮೃತಕಲಾ, ಬಿಆರ್‌ಪಿಗಳಾದ ರತ್ನಕುಮಾರಿ,ಓಬಳೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕ ಮೋನಪ್ಪ ಪೂಜಾರಿ ಸ್ವಾಗತಿಸಿ, ಶಿಕ್ಷಕಿ ಪ್ರವೀಣಾ ರೈ ವಂದಿಸಿದರು. ಶಿಕ್ಷಕಿ ಸವಿತಾ ಪಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಡೆದ ಜನಪದ ನೃತ್ಯ ಹಾಗೂ ಪಾತ್ರಾಭಿನಯ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಪಾಪೆಮಜಲು ಶಾಲಾ ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಯಿತು.

LEAVE A REPLY

Please enter your comment!
Please enter your name here