ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ 

0

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ಬಿಡುಗಡೆ ಅ.31ರಂದು ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ಪ್ರಾರಂಭದಲ್ಲಿ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವರ ಸನ್ನಿಧಿಯಲ್ಲಿಟ್ಟು ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ  ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್  ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ  ನಾರಾಯಣ ಭಟ್ ಪಟ್ಟೆ, ಅಪ್ಪಯ್ಯ ನಾಯ್ಕ ತಲೆಂಜಿ, ಉತ್ಸವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ಲು, ಸುಬ್ಬಯ್ಯ ರೈ ಹಲಸಿನಡಿ, ಗಂಗಾಧರ ರೈ ಮೇಗಿನಮನೆ, ಸುರೇಶ್ ರೈ ಪಲ್ಲತ್ತಾರು, ಉತ್ತಮ್ ಭಟ್ ಪಡ್ಪು, ಗಂಗಾಧರ ಅಚಾರ್ಯ, ಉಲ್ಲಾಸ್ ಭಟ್ ಪಡ್ಪು,  ನಾರಾಯಣ ಪಾಟಾಳಿ ಪಟ್ಟೆ, ಪುಷ್ಪರಾಜ್ ಅಳ್ವ, ಕಿರಣ್ ರೈ ಮೈಂದನಡ್ಕ, ಸುಧಾಕರ ರೈ ಈಶಮೂಲೆ, ನಾರಾಯಣ ಪಾಟಾಳಿ ಮೈಂದನಡ್ಕ, ಶಂಕರಿ ಪಟ್ಟೆ, ಜಯಲಕ್ಷ್ಮಿ ದೊಡ್ಡಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here