ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ನಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ

0

ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ನಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ಆ.30ರಂದು ನಡೆಯಿತು. ಗ್ರಾ.ಪಂ ಅಧ್ಯಕ್ಷೆ ಚಂದ್ರಾವತಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ ಮಾಜಿ ಸದಸ್ಯ ಪಿ.ಪಿ ವರ್ಗೀಸ್ ಹಾಗೂ ನೂಜಿಬಾಳ್ತಿಲ ಗ್ರಾ.ಪಂ ಉಪಾಧ್ಯಕ್ಷ ಚಂದ್ರಶೇಖರ ಹಳೆನೂಜಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಫಲಾನುಭವಿ ಮಹಿಳೆಯರು ಭಾಗವಹಿಸಿ ಮೈಸೂರಿನಲ್ಲಿ ನಡೆದ ಯೋಜನೆಯ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಿದರು. ಗ್ರಾ.ಪಂ ಸದಸ್ಯರಾದ ವಿಜಯಲಕ್ಷ್ಮಿ, ಗಂಗಮ್ಮ, ವಸಂತ ಕುಬಲಾಡಿ, ಪಿ.ಜೆ ಜೋಸೆಫ್ ಉಪಸ್ಥಿತರಿದ್ದರು. ಗ್ರಾ.ಪಂ ಪಿಡಿಓ ಗುರುವ ಎಸ್ ಹಾಗೂ ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿ ಸಹಕರಿಸಿದರು.

LEAVE A REPLY

Please enter your comment!
Please enter your name here