ಪುತ್ತೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಕೆದಂಬಾಡಿ ಗ್ರಾಮ ಪಂಚಾಯತ್‌ನಲ್ಲಿ ಆ.30ರಂದು ಚಾಲನೆ ನೀಡಲಾಯಿತು. ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆಯವರು ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ರತನ್ ರೈ ಕುಂಬ್ರ, ಸದಸ್ಯರುಗಳಾದ ವಿಠಲ ರೈ ಮಿತ್ತೋಡಿ, ಸುಜಾತ ರೈ, ಅಸ್ಮಾ, ರೇವತಿ ಬೋಳೋಡಿ, ಕಾಂಗ್ರೆಸ್ ಕೆದಂಬಾಡಿ ವಲಯ ಅಧ್ಯಕ್ಷ ಪುರಂದರ ರೈ ಕೋರಿಕ್ಕಾರು, ಗ್ರಾಪಂ ಮಾಜಿ ಅಧ್ಯಕ್ಷ ಬೋಳೋಡಿ ಚಂದ್ರಹಾಸ ರೈ, ಬ್ಲಾಕ್ ಉಪಾಧ್ಯಕ್ಷ ಮನೋಹರ ರೈ ಎಂಡೆಸಾಗು, ಬ್ಲಾಕ್ ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಮೆಲ್ವಿನ್ ಮೊಂತೆರೋ, ಬ್ಲಾಕ್ ಕಾರ್ಯದರ್ಶಿ ಹಬೀಬ್ ಕಣ್ಣೂರು, ವಲಯ ಕಾರ್ಯದರ್ಶಿ ಅಶ್ರಫ್ ಸಾರೆಪುಣಿ, ಬೂತ್ ಅಧ್ಯಕ್ಷರುಗಳಾದ ಸೀತಾರಾಮ ರೈ ಚಾವಡಿ, ಅಬ್ದುಲ್ ಹಾಜಿ ಗಟ್ಟಮನೆ, ಭಾಸ್ಕರ ನಾಯ್ಕ್, ಕಾರ್ಯದರ್ಶಿ ತಾರಾನಾಥ ಶೆಟ್ಟಿ ಮುಡಾಲ, ಇಸ್ಮಾಯಿಲ್ ಗಟ್ಟಮನೆ, ಚೋಮಯ್ಯ ಸಹಿತ ನೂರಾರು ಮಂದಿ ಉಪಸ್ಥಿತರಿದ್ದರು. ಸುಮಾರು 600 ಕ್ಕೂ ಅಧಿಕ ಮಂದಿ ಫಲಾನುಭವಿಗಳು, ಗ್ರಾಮಸ್ಥರು ಸೇರಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು.
©