ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ 595.46 ಕೋಟಿ ರೂ. ಗಳ ವ್ಯವಹಾರ – 2.15 ಕೋಟಿ ರೂ. ನಿವ್ವಳ ಲಾಭ: ಸೀತಾರಾಮ ರೈ ಸವಣೂರು

0

ಪುತ್ತೂರು: ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 21 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 13 ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, 2022-23 ನೇ ಸಾಲಿನ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯನ್ನು ಸಾಧಿಸಿ ಸಂಘವು 595.46 ಕೋಟಿ ರೂ. ಗಳ ದಾಖಲೆಯ ವ್ಯವಹಾರವನ್ನು ನಡೆಸಿ ರೂ.2.15 ಕೋಟಿ ರೂ. ಗಳಷ್ಟು ಲಾಭವನ್ನು ಗಳಿಸಿರುತ್ತದೆ ಎಂದು ಸಂಘದ ಅಧ್ಯಕ್ಷರಾದ ಸಹಕಾರರತ್ನ ಕೆ.ಸೀತಾರಾಮ ಸವಣೂರು ರವರು ತಿಳಿಸಿರುತ್ತಾರೆ.

ಸಂಘದ 2022-23 ನೇ ಆರ್ಥಿಕ ಸಾಲಿನ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 7961 ಸದಸ್ಯರಿದ್ದು ಒಟ್ಟು 2.92 ಕೋಟಿ ರೂ. ಗಳಷ್ಟು ಪಾಲು ಬಂಡವಾಳವನ್ನು ಹೊಂದಿರುತ್ತದೆ. ಸಂಘವು 116.38 ಕೋಟಿ ರೂ. ಠೇವಣಿಯನ್ನು ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 16.50 ರಷ್ಟು ಹೆಚ್ಚಳವಾಗಿದೆ. ರೂ. 91.16 ಕೋಟಿ ರೂ.ಗಳಷ್ಟು ಹೊರಬಾಕಿ ಸಾಲ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.23.12 ರಷ್ಟು ಹೆಚ್ಚಳವಾಗಿದೆ. ಸಂಘವು 3.02 ಕೋಟಿ ರೂ.ಗಳಷ್ಟು ಕ್ಷೇಮ ನಿಧಿ ಮತ್ತು 1.97 ಕೋಟಿ ರೂ. ಗಳಷ್ಟು ಇತರ ನಿಧಿಗಳನ್ನು ಹೊಂದಿ, ರೂ. 124,57 ಕೋಟಿಗಳಷ್ಟು ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ. ಸಂಘವು ಸ್ಥಾಪನೆಗೊಂಡ ವರ್ಷದಿಂದ ತನ್ನ ಸದಸ್ಯರಿಗೆ ಡಿವಿಡೆಂಡ್ ನೀಡಿಕೊಂಡು ಬರುತ್ತಿರುವ ಮತ್ತು ಆಡಿಟ್ ವರ್ಗದಲ್ಲಿ ಸತತವಾಗಿ ಏ ತರಗತಿಯನ್ನು ಕಾಯ್ದುಕೊಂಡು ಬಂದಿರುವ ಏಕೈಕ ಸಂಘವಾಗಿರುತ್ತದೆ. ಸಂಘದ ಕೇಂದ್ರ ಕಚೇರಿಗೆ ಸ್ವಂತ ಕಟ್ಟಡವನ್ನು ಹೊಂದುವ ಉದ್ದೇಶದಿಂದ ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ 0.75 ಸೆಂಟ್ಸ್ ಪರಿವರ್ತಿತ ನಿವೇಶನವನ್ನು ರೂ.1,28,99,100 ವೆಚ್ಚದಲ್ಲಿ ಈಗಾಗಲೇ ಸಂಘದ ಹೆಸರಿನಲ್ಲಿ ಖರೀದಿ ಮಾಡಲಾಗಿದೆ ಎಂದು ಸವಣೂರು ಕೆ.ಸೀತಾರಾಮ ರೈ ತಿಳಿಸಿದ್ದಾರೆ.

ಸಂಘವು ತನ್ನ ಎಲ್ಲಾ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳಲ್ಲಿ 5 ರಿಂದ 10 ನೇ ತರಗತಿಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತನ್ನ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನವನ್ನು ಮಹಾಸಭೆಯ ದಿನದಂದು ನೀಡಿಕೊಂಡು ಬರುತ್ತಿದ್ದು, ಈವರೆಗೆ ಒಟ್ಟು ರೂ.17,37,000 ಮೊತ್ತವನ್ನು ಒಟ್ಟು 979 ವಿಧ್ಯಾರ್ಥಿಗಳಿಗೆ ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಗಿದೆ. ಮಾತ್ರವಲ್ಲದೆ ಸಂಘದಲ್ಲಿ ಒಟ್ಟು 55 ಸಿಬ್ಬಂದಿಗಳು ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಸಂಘಕ್ಕೆ 2022-23 ನೇ ಸಾಲಿನಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನಿಂದ ಸಂಘದ ಅತ್ಯುತ್ತಮ ಸಾಧನೆಗಾಗಿ ಸಾಧನಾ ಪ್ರಶಸ್ತಿ ಗಳಿಸಿದ್ದು ಈವರೆಗೆ ಒಟ್ಟು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ ನಿಂದ 4 ನೇ ಬಾರಿ ಸಾಧನಾ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಸೀತಾರಾಮ ರೈ ಸವಣೂರು

ಸೀತಾರಾಮ ರೈ ಸವಣೂರು
ಅಧ್ಯಕ್ಷರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘ

LEAVE A REPLY

Please enter your comment!
Please enter your name here