ಎನ್‌ಎಸ್‌ಎಸ್ ಘಟಕದ ಸೇವಾಕಾರ್ಯ ಶ್ಲಾಘನೀಯ: ಶಾಸಕ ಅಶೋಕ್ ರೈ
ಪುತ್ತೂರು: ವಿವೇಕಾನಂದ ಕಾನೂನು ವಿದ್ಯಾಲಯದ ಎನ್‌ಎಸ್‌ಎಸ್ ಘಟಕದಿಂದ ಒಂದು ವಾರಗಳ ಶಿಬಿರವು ಕೋಡಿಂಬಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿ ಆ. 28 ರಂದು ಉದ್ಘಾಟನೆಗೊಂಡಿದೆ. ಆ. 28 ರಿಂದ ಸೆ.3 ರತನಕ ಒಂದು ವಾರಗಳ ಕಾಲ ಈ ಶಿಬಿರ ನಡೆಯಲಿದೆ.

ಶಿಬಿರವನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಉದ್ಘಾಟಿಸಿ ಮಾತನಾಡಿ, ಎನ್‌ಎಸ್‌ಎಸ್ ಘಟಕದ ಸೇವಾ ಕಾರ್ಯ ಶ್ಲಾಘನೀಯವಾಗಿದ್ದು ಘಟಕದ ಸದಸ್ಯ ವಿದ್ಯಾರ್ಥಿಗಳು ಒಟ್ಟಾಗಿ ಕಾರ್ಯಪೃವ್ರತ್ತರಾಗುವ ಮೂಲಕ ಸೇವೆಯನ್ನು ಮಾಡುವ ಇತರರಿಗೆ ಮಾದರಿಯಾಗಿದ್ದಾರೆ. ಕೋಡಿಂಬಾಡಿ ಸರಕಾರಿ ಶಾಲೆಯನ್ನು ಈ ಬಾರಿ ಕ್ಯಾಂಪ್‌ಗೆ ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಪ್ರತೀಯೊಂದು ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.

ವಿವೇಕಾನಂದ ಕಾನೂನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸುರೇಂದ್ರ ಕಿಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿವೇಕಾನಂದ ಕಾನೂನು ಕಾಲೇಜು ಸಂಚಾಲಕ ವಿಜಯನಾರಾಯಣ ಕೆ ಎಂ.ಪ್ರಾಂಶುಪಾಲರಾದ ಅಕ್ಷತಾ ಎ ಪಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇದರ ಅಧ್ಯಕ್ಷ ಶಿವಪ್ರಸಾದ್ ಕೊಡಿಮನಡ್ಕ, ಕೋಡಿಂಬಾಡಿ ಗ್ರಾಪಂ ಅಧ್ಯಕ್ಷೆ ಮಲ್ಲಿಕಾಪೂಜಾರಿ, ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ಕೋಡಿಂಬಾಡಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಶಾಲೆಯ ಮುಖ್ಯಶಿಕ್ಷಕ ಬಾಲಕೃಷ್ಣ ಎನ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಶಿಬಿರ ಸಂಯೋಜಕ ಲಕ್ಷ್ಮಿಕಾಂತ್ ರೈ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್‌ಎಸ್‌ಎಸ್ ನಾಯಕ ಕೌಶಿಕ್ ಸ್ವಾಗತಿಸಿದರು. ವೃಂದಾಹೆಗ್ಡೆ ವಂದಿಸಿದರು. ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.