ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು. ಭೇಟಿಯ ಸಂಧರ್ಭದಲ್ಲಿ ವಿದ್ಯಾರ್ಥಿಗಳ ಜೊತೆ ಕುಳಿತು ಸಂವಾದ ನಡೆಸಿ ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಣ ಬಹಳ ಮುಖ್ಯ. ನೀವೆಲ್ಲರು ಉತ್ತಮ ಶಿಕ್ಷಣವನ್ನು ಪಡೆಯಿರಿ. ಮನುಷ್ಯರಿಗೆ ದೇವರು ಎಲ್ಲಾ ಅಂಗಾಗಗಳನ್ನು ಚೆನ್ನಾಗಿ ನೀಡಿದ್ದು, ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಿ ಎಂದು ತಿಳಿ ಹೇಳಿದರು. ಈ ಸಂದರ್ಭದಲ್ಲಿ ರಿಜಿಸ್ಟರ್ ಕೋಚಿಂಗ್ ಸೆಂಟರ್‌ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ ದರದ ವರುಷದ ಬಸ್ ಪಾಸಿನ ವ್ಯವಸ್ಥೆಯನ್ನು ಮಾಡಿಕೊಡಬೇಕಾಗಿ ಸಂಸ್ಥೆಯ ಸಂಚಾಲಕರು, ವಿದ್ಯಾರ್ಥಿಗಳು ಮಾನ್ಯಶಾಸಕರಿಗೆ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಮುಖ್ಯಶಿಕ್ಷಕಿ, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
©