ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಇಂಟರ‍್ಯಾಕ್ಟ್ ಕ್ಲಬ್ ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ ಜರಗಿತು.
ದಂತ ವೈದ್ಯೆ ಡಾ.ತಾರಾ ಚಂದ್ರನ್ ಪ್ರಾಸ್ತಾವಿಕವಾಗಿ ಮಾತನಾಡಿ, ಹಲ್ಲುಗಳ ಸ್ವಚ್ಛತೆಯನ್ನು ಕಾಪಾಡಲು ಐದು ವಿಧಾನಗಳನ್ನು ಪ್ರತಿನಿತ್ಯ ಅನುಸರಿಸಬೇಕೆಂದರು. ರೋಟರಿ ಕ್ಲಬ್ ಸಿಟಿ ಅಧ್ಯಕ್ಷೆ ಗ್ರೇಸಿ ಗೊನ್ಸಾಲ್ವಿಸರವರು ಕಾರ್ಯಕ್ರಮದ ಪ್ರಾಮುಖ್ಯತೆ ತಿಳಿಸಿದರು. ಅಸಿಸ್ಟೆಂಟ್ ಗವರ್ನರ್ ರೊಟೆರಿಯನ್ ಲಾರೆನ್ಸ್ ಗೊನ್ಸಾಲ್ವಿಸ್ ರವರು ಸಂದೇಶ ನೀಡಿದರು. ಜೊತೆ ಕಾರ್ಯದರ್ಶಿ ದಯನಂದ್, ಶಾಲಾ ಮುಖ್ಯೋಪಾಧ್ಯಾಯಿನಿ ರೋಸಲಿನ್ ಲೋಬೊ, ಇಂರ‍್ಯಾಕ್ಟ್ ಕ್ಲಬ್‌ನ ಅಧ್ಯಕ್ಷೆ ಹಲೀಮಾ ಶೈಮಾ, ಕಾರ್ಯದರ್ಶಿ ನಿಶ್ಮಾ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಶಾಂತ್ ಶೆಣೈ, ಶಶಿಧರ್ ಕಜೆ, ಜೋನ್ ಕುಟಿನ್ಹಾ, ಸುರೇಂದ್ರ ಕಿಣಿ, ಸ್ವಾತಿ ಮಲ್ಲಾರ, ಅಕ್ಷತಾ ಶೆಣೈ ಉಪಸ್ಥಿತರಿದ್ದರು. ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಇಂರ‍್ಯಾಕ್ಟ್ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ತಪಾಸಣಾ ಶಿಬಿರದಲ್ಲಿ 13 ದಂತ ವೈದ್ಯರು ವಿದ್ಯಾರ್ಥಿನಿಯರ ದಂತ ತಪಾಸಣೆ ನಡೆಸಿ ಸೂಕ್ತ ಸಲಹೆ ನೀಡಿದರು. ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಇಂಟರ‍್ಯಾಕ್ಟ್ ಕ್ಲಬ್ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವತಿಯಿಂದ ವೈದ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ರೋಸಲಿನ್ ಲೋಬೋ ಸ್ವಾಗತಿಸಿದರು. ಇಂರ‍್ಯಾಕ್ಟ್ ಕ್ಲಬ್‌ನ ಸಂಯೋಜಕಿ ರೀನಾ ತೆರೆಜ್ ರೆಬೆಲ್ಲೊ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.