ಪುತ್ತೂರು: ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಜೋನ್ ಕೆನ್ಯೂಟ್ ಮಸ್ಕರೇನ್ಹಸ್ ರವರು ನೇಮಕಗೊಂಡಿದ್ದಾರೆ.
ಶಾಸಕರಾದ ಅಶೋಕ್ ಕುಮಾರ್ ರೈ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಾಜಾರಾಂ ಕೆ.ಬಿರವರ ಶಿಫಾರಸ್ಸಿನ ಮೇರೆಗೆ ದ.ಕ ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ರವರು ಉಪ್ಪಿನಂಗಡಿ ನೆಕ್ಕಿಲಾಡಿ ನಿವಾಸಿಯಾಗಿರುವ ಜೋನ್ ಕೆನ್ಯೂಟ್ ಮಸ್ಕರೇನ್ಹಸ್ ರವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.