ಪುತ್ತೂರು: ಭಾರತ ಸರ್ಕಾರ ಮತ್ತು ಭಾರತ ಕ್ರೀಡಾ ಪ್ರಾಧಿಕಾರ ವತಿಯಿಂದ ಜಾರ್ಖಂಡ್‌ನ ರಾಂಚಿಯಲ್ಲಿ ಆ.27 ರಂದು ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ 60 ಕೆ.ಜಿ. ವಿಭಾಗದಲ್ಲಿ ಮಂಗಳೂರಿನ ಕ್ಯಾಂಬ್ರಿಡ್ಜ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ತನ್ವಿಷಾ ಲಲಿತ್ ರೈ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ದ.ಕ. ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ನಿಂದ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ 7 ವಿದ್ಯಾರ್ಥಿಗಳು ಚಿನ್ನದ ಪದಕಗಳನ್ನು ಪಡೆದಿದ್ದು, ಅವರ ಪೈಕಿ ಈಕೆ ಓರ್ವರಾಗಿದ್ದಾರೆ. ಈಕೆ ಬಾಳ ಲಲಿತ್ ರೈ ಮತ್ತು ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದ ಅಧ್ಯಕ್ಷ ಬೆದ್ರುಮಾರ್ ಜೈಶಂಕರ ರೈರವರ ಸಹೋದರಿ ಪೂರ್ಣಿಮಾ ಎಲ್. ರೈ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಾರೆ. ಈಕೆಗೆ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ಸಂಸ್ಥೆಯ ಮುಖ್ಯ ಶಿಕ್ಷಕ ನಿತಿನ್ ಸುವರ್ಣ ಮತ್ತು ಶಿಕ್ಷಕ ಸಂಪತ್ ಕುಮಾರ್ ಇವರು ತರಬೇತಿ ನೀಡುತ್ತಿದ್ದಾರೆ.