ಲಯನ್ಸ್ ಪುತ್ತೂರ್ದ ಮುತ್ತು ಕ್ಲಬ್ ನಿಂದ ವನಮಹೋತ್ಸವ

0

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ವತಿಯಿಂದ ಹಾರಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು.
ಸುಮಾರು ನೂರು ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಅಧ್ಯಕ್ಷರಾದ ಎನ್ ರವೀಂದ್ರ ಪೈಯವರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಅರಣ್ಯ ಇಲಾಖೆಯ ಅಧಿಕಾರಿ ದಿವ್ಯರಾಣಿ ವನಮಹೋತ್ಸವದ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಲಯನ್ಸ್ ಕಾರ್ಯದರ್ಶಿ ಮೋಹನ್ ನಾಯಕ್, ಲಯನ್ಸ್ ಪ್ರಾಂತ್ಯ VI ರ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್ , ಕ್ಲಬ್ ನಿಕಟಪೂರ್ವ ಅಧ್ಯಕ್ಷ ಕೇಶವಪೂಜಾರಿ ಬೆದ್ರಾಳ, ಸದಸ್ಯರಾದ ವತ್ಸಲಾ ಪದ್ಮನಾಭ ಶೆಟ್ಟಿ, ರೋಶನ್ ಡಾಯಸ್, ಶಿಕ್ಷಕಿ ಗಂಗಾವತಿ ಶೆಟ್ಟಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯ ಕೆ.ಕೆ ಮಾಸ್ಟರ್ ವಂದಿಸಿದರು.

LEAVE A REPLY

Please enter your comment!
Please enter your name here