ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಜರುಗಿದ ಕಡಬ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ತಂಡಕ್ಕೆ ಮಾಧವ ಬಿ.ಕೆ., ಜಸ್ವಂತ್ ಹಾಗೂ ಮಂಜುನಾಥ್‌ರವರು ತರಬೇತಿ ನೀಡಿದ್ದರು. ಬಾಲಕರ ವಿಭಾಗದಲ್ಲಿ ಕಾರ್ತಿಕ್-ಬೆಸ್ಟ್ ರೈಡರ್, ನಿತೇಶ್ ಗೌಡ-ಬೆಸ್ಟ್ ಕ್ಯಾಚರ್ ಹಾಗೂ ಬಾಲಕಿಯರ ವಿಭಾಗದಲ್ಲಿ ಊರ್ಮಿಳಾ-ಬೆಸ್ಟ್ ಕ್ಯಾಚರ್, ವರ್ಷಾ-ಬೆಸ್ಟ್ ಆಲ್‌ರೌಂಡರ್ ಆಗಿ ವೈಯಕ್ತಿಕ ಬಹುಮಾನಗಳನ್ನು ಪಡೆದುಕೊಂಡರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಸಹಕರಿಸಿದ್ದರು.