ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಗಣಪತಿ ಹೋಮ, ಶತರುದ್ರಾಭಿಷೇಕ ಹಾಗೂ ಸೀಯಾಳಾಭಿಷೇಕ ಸೆ. 2 ಮೂರನೇ ಶ್ರಾವಣ ಶನಿವಾರದಂದು ನೆರವೇರಿತು. ದೇವಳದ ಪ್ರಧಾನ ಅರ್ಚಕ ವೇ.ಮೂ. ವೆಂಕಟ್ರಮಣ ಭಟ್ ಕಾನುಮೂಲೆ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಭಕ್ತಾದಿಗಳು ಕಾರ್ಯಕ್ರಮದ ಸಲುವಾಗಿ ಹೂ, ಹಿಂಗಾರ, ಬಿಲ್ವಪತ್ರೆ, ಸೀಯಾಳ, ತೆಂಗಿನಕಾಯಿ, ಬಲಿವಾಡು ಇತ್ಯಾದಿಗಳನ್ನು ಸಮರ್ಪಿಸಿದರು.
ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು, ಆಡಳಿತ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು ಸೇರಿದಂತೆ ಊರ ಪರವೂರ ಭಕ್ತಾಭಿಮಾನಿಗಳು ಪಾಲ್ಗೊಂಡರು. ಮಧ್ಯಾಹ್ನ ಮಹಾಪೂಜೆ, ಶ್ರಾವಣ ಶನಿವಾರದ ವಿಶೇಷ ಪೂಜೆ ಬಳಿಕ ಅನ್ನಸಂತರ್ಪಣೆ ಜರಗಿತು.
ಯಕ್ಷಗಾನ ತಾಳಮದ್ದಳೆ:
ಬೆಳಿಗ್ಗೆ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ಯುವ ಕಲಾವಿದರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಇಂದ್ರಜಿತು ಕಾಳಗ’ ಯಕ್ಷಗಾನ ತಾಳಮದ್ದಳೆ ನಡೆಯಿತು.