ಪುತ್ತೂರು:ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಬೆಳ್ತಂಗಡಿಯ ತಾಲೂಕು ಆಡಳಿತ ಸೌಧದ ಎದುರು ಸೆ.3ರಂದು ಬೆಳಗ್ಗಿನಿಂದ ಮಧ್ಯಾಹ್ನ ತನಕ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೇಟೆಯಲ್ಲಿ ಸೆ.3ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 5 ಗಂಟೆ ತನಕ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉದ್ದೇಶಿತ ಪ್ರತಿಭಟನೆ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಕೋರಿ ಬೆಳ್ತಂಗಡಿ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು.ಈ ಹಿನ್ನೆಲೆಯಲ್ಲಿ ರಾಷ್ಟಿçÃಯ ಹೆದ್ದಾರಿ -73 ಮಾರ್ಗದಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಡಾ|ಜಿ.ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಸೆ.3ರಂದು ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನಸಂದಣಿಯಾಗಿ ರಸ್ತೆಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದಈ ಸಮಯದಲ್ಲಿ ಬೆಳ್ತಂಗಡಿ ಪೇಟೆಯನ್ನು ಹಾದು ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ ಗಂಟೆ 9ರಿಂದ ಸಂಜೆ 5 ಗಂಟೆವರೆಗೆ ಕೊಯ್ಯೂರು ಕ್ರಾಸ್ ರಸ್ತೆ ಮೂಲಕ ಅದ್ರುಪರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು, ಮಂಗಳೂರುನಿAದ ಉಜಿರೆ ಕಡೆಗೆ ಬರುವ ಎಲ್ಲಾ ವಾಹನಗಳನ್ನು ಗುರುವಾಯನಕೆರೆಯಲ್ಲಿ, ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಅದ್ರುಪೆರಾಲ್ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್ ಕ್ರಾಸ್‌ನಿಂದ ಕನ್ನಾಜೆ ಪಡ್ಲಾಡಿ ಲಾಯಿಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವAತೆ ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ.
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಸೆ.3ರಂದು ಬೆಳಿಗ್ಗೆ 9ರಿಂದ ಸಂಜೆ 3ರ ತನಕ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟಿçÃಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಎದುರು ನಡೆಸಲು ಉದ್ದೇಶಿಸಿರುತ್ತಾರೆ.ಸದ್ರಿ ಸಭೆಗೆ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ಗಿರೀಶ್ ಮಟ್ಟಣ್ಣವರ, ಸಾಮಾಜಿಕ ಹೋರಾಟಗಾರರು, ಶ್ರೀಮತಿ ಪ್ರಸನ್ನ ರವಿ, ಸಾಮಾಜಿಕ ಹೋರಾಟಗಾರ್ತಿ, ಶ್ರೀಮತಿ ಗೀತಾ, ಮಾನವ ಹಕ್ಕು ಆಯೋಗದ ಕಾರ್ಯದರ್ಶಿ ಹಾಗೂ ಒಡನಾಡಿ ಸಂಸ್ಥೆಯ ಮುಖ್ಯಸ್ಥರು, ರಾಜ್ಯ ಒಕ್ಕಲಿಗ ಸಂಘದ ಮುಖ್ಯಸ್ಥರು ಮುಂತಾದವರು ಭಾಗವಹಿಸಲಿದ್ದು, ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರದಲ್ಲಿ ಬದಲಾವಣೆ ಕೋರಿ ಬೆಳ್ತಂಗಡಿ ತಹಸಿಲ್ದಾರ್ ಜಿಲ್ಲಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.
ಅವಶ್ಯವಿರುವ ಕಡೆ ಸೂಚನ ಫಲಕ:
ಈ ಆದೇಶದ ಅನ್ವಯ ಸದ್ರಿ ರಸ್ತೆಯಲ್ಲಿ ಅವಶ್ಯವಿರುವ ಸೂಚನಾ ಫಲಕ ಅಳವಡಿಸಲು ಹಾಗೂ ಸಂಚಾರ ನಿಯಂತ್ರಣ, ಸಿಬ್ಬಂದಿಗಳನ್ನು ನೇಮಕಗೊಳಿಸಲು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಸೂಚನೆ ನೀಡಿದ್ದಾರೆ.
Home Uncategorized ಸೌಜನ್ಯ ಪ್ರಕರಣ:ತಿಮರೋಡಿ ನೇತೃತ್ವದಲ್ಲಿ ಪ್ರತಿಭಟನೆ, ಸೆ.3 ಬೆಳಿಗ್ಗೆ 9ರಿಂದ ಸಂಜೆ 5ರ ತನಕ ಬೆಳ್ತಂಗಡಿಯಲ್ಲಿ ವಾಹನ...