ಪುತ್ತೂರು: ಇತ್ತೀಚೆಗೆ ನಿಧನರಾದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆಯು ಸೆ.2ರಂದು ಕೊಂಬೆಟ್ಟು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.
ನುಡಿ ನಮನದ ಸಲ್ಲಿಸಿದ ಪುತ್ತೂರಿನ ಖ್ಯಾತ ವೈದ್ಯರು, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಹುಟ್ಟಿದ ಮನುಷ್ಯನಿಗೆ ಮರಣ ನಿಶ್ವಿತ. ಆದರೂ ಸೀತಾರಾಮ ಶೆಟ್ಟಿಯವರಿಗೆ ಸಣ್ಣ ವಯಸ್ಸಿನಲ್ಲಿಯೇ ವೇಗವಾಗಿ ಬಂದೊದಗಿದೆ. ಸದಾ ಸಮಾಜಮುಖಿ ವ್ಯಕ್ತಿತ್ವದ ಸೀತಾರಾಮ ಶೆಟ್ಟಿಯವರು ಸೀತಣ್ಣ ಎಂದೇ ಎಲ್ಲರೊಂದಿಗೆ ಗುರುತಿಸಿಕೊಂಡವರು.ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಎಲ್ಲಾ ಸಂದರ್ಭಗಳಲ್ಲಿಯೂ ಮುಂಚೂಣಿಯಲ್ಲಿ ನಿಂತು ಬಹಳಷ್ಟು ಉತ್ತಮ ಕೆಲಸ ಮಾಡಿದವರು.ಒಡನಾಡಿಯಾಗಿ ಸಂಪ್ಯದ ಜನತೆಯೊಂದಿಗೆ ಅನ್ಯೋನ್ಯತೆಯಿಂದಿದ್ದವರು ಎಂದರು.
ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಸದಾ ನಗುಮೊಗದಿಂದ ಎಲ್ಲರೊಂದಿಗೆ ಬೆರೆಯುತ್ತಿದ್ದ ಸೀತಾರಾಮ ಶೆಟ್ಟಿಯವರ ಮರಣ ವಾರ್ತೆ ಯಾರಿಗೂ ನಂಬಲು ಸಾಧ್ಯವಾಗಿಲ್ಲ. ಹಲವಾರು ಸಾಮಾಜಿಕ, ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಎಲ್ಲರೊಂದಿಗೆ ಪ್ರೀತಿಯಿಂದ ಇದ್ದವರು.ಯುವ ಬಂಟರ ಸಂಘದ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದವರು.ತಾನು ಬಾಳಿ ಬೆಳಗಿನ ಅಲ್ಪ ಅವಧಿಯಲ್ಲಿಯೇ ಉತ್ತಮ ಸೇವೆ ನೀಡಿದವರು.ಸಹೋದರರು ಪರಸ್ಪರ ಅನ್ಯೋನ್ಯತೆಯಿಂದ ಇದ್ದ ಅವರ ಬದುಕು ನಾವು ಯಾವ ರೀತಿ ಬದುಕಬೇಕೆಂಬುದಕ್ಕೆ ಆದರ್ಶವಾಗಿದ್ದ ಅವರು ಸಮಾಜದ ಪ್ರೀತಿ ಗಳಿಸಿದವರು ಎಂದರು.
ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಮಾತನಾಡಿ, ಹಲವು ಸಮಾಜಮುಖಿ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಸೀತಾರಾಮ ಶೆಟ್ಟಿಯವರು ಎಲ್ಲರೊಂದಿಗೆ ಸಹೋದರೆತೆಯಿಂದ ಬೆರೆಯುತ್ತಿದ್ದವರು.ಎಲ್ಲರೊಂದಿಗೂ ಆದರದಿಂದ ಮಾತನಾಡಿಸುವವರು.ಸಂಪ್ಯ ನವಚೇತನ ಯುವಕ ಮಂಡಲ, ಕಂಬಳತ್ತಡ್ಡ ಶ್ರೀಕೃಷ್ಣ ಯುವಕ ಮಂಡಲ, ಜೇಸಿಐ, ಯುವ ಬಂಟರ ಸಂಘಗಳಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ ಅವರು ಯುವಕರಿಗೆ ಅದರ್ಶಪ್ರಾಯರಾಗಿದ್ದರು ಎಂದರು.
ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಇಳಂತಾಜೆ, ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು, ಮಾಜಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಅಕ್ಷಯ ಗ್ರೂಪ್ನ ಮ್ಹಾಲಕ ಜಯಂತ ನಡುಬೈಲು, ಉದ್ಯಮಿ ಪುರಂದರ ರೈ ಮಿತ್ರಂಪಾಡಿ, ಬಂಟರ ಸಂಘದ ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು, ರಾಕೇಶ್ ರೈ ಕೆಡೆಂಜಿ, ಬಿರುಮಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಜೆ ರೈ, ಗಣೇಶ್ ರೈ ಮೂಲೆ, ಕೊಳ್ತಿಗೆ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ವಸಂತ ಕುಮಾರ್ ರೈ ದುಗ್ಗಳ, ಜಯರಾಮ ರೈ ನುಳಿಯಾಲು, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಸೀತಾರಾಮ ಶೆಟ್ಟಿಯವರ ಸಹೋದರರಾದ ಜಯಂತ ಶೆಟ್ಟಿ, ರವೀಂದ್ರ ಶೆಟ್ಟಿ, ಕುಟುಂಬಸ್ಥರು ಸೇರಿದಂತೆ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.