ಕೊಂಬೆಟ್ಟು ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಗೋಪಾಲ ಗೌಡ ಡಿ

0

ಪುತ್ತೂರು: ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಪ್ರಾಂಶುಪಾಲರಾಗಿ ಗೋಪಾಲಗೌಡ ಡಿ ಅವರು ಸೆ.01ರಂದು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ. ಇವರು 1991ರಲ್ಲಿ ಮಂಗಳೂರು ಕೆನರಾ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 1992ರಲ್ಲಿ ಸರಕಾರಿ ಖಾಯಂ ಭೌತಶಾಸ್ತ್ರ ಉಪನ್ಯಾಸಕನಾಗಿ ಸರಕಾರಿ ಪದವಿ ಕಾಲೇಜು ಹೆಬ್ರಿ ಇಲ್ಲಿ ಕರ್ತವ್ಯ ನಿರ್ವಹಿಸಿ, ತದನಂತರ 1998ರಲ್ಲಿಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 11 ವರ್ಷಗಳ ಸೇವೆಯೊಂದಿಗೆ 2 ವರ್ಷಗಳ ಪ್ರಭಾರ ಪ್ರಾಂಶುಪಾಲರಾಗಿ ಹುದ್ದೆ ನಿರ್ವಹಿಸಿರುತ್ತಾರೆ. 2009ರಲ್ಲಿ ಪುಂಜಾಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿ, 2012ರಲ್ಲಿ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಕರ್ತವ್ಯವನ್ನು ನಿರ್ವಹಿಸುತ್ತಾರೆ. 2018ರಲ್ಲಿ ಪ್ರಾಂಶುಪಾಲರಾಗಿ ಭಡ್ತಿಗೊಂಡು ಬೆಟ್ಟಂಪಾಡಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2018ರಿಂದ ಆ.31-2023ರ ವರೆಗೆ ಕರ್ತವ್ಯ ನಿರ್ವಹಿಸಿ ಸೆ.01-2023ರಂದು ಕೊಂಬೆಟ್ಟು ಸರಕಾರಿ ಪದವಿ ಕಾಲೇಜಿಗೆ ವರ್ಗಾವಣೆಗೊಂಡು ಪ್ರಾಂಶುಪಾಲರಾಗಿ ಕರ್ತವ್ಯಕ್ಕೆ ಹಾಜರಾಗಿರುತ್ತಾರೆ. ಸುಮಾರು 33 ವರ್ಷಗಳ ಸುಧೀರ್ಘ ಸೇವಾನುಭವವನ್ನು ಹೊಂದಿರುವ ಇವರು ಮೂಲತಃ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ದಗಮಜಲು ಎಂಬಲ್ಲಿನ ದಿ. ಶ್ರೀ ರುಕ್ಮ ಗೌಡ ಮತ್ತು ರಾಮಕ್ಕ ದಂಪತಿಗಳ 8ನೇ ಪುತ್ರರಾಗಿದ್ದು ಪ್ರಸ್ತುತ ಪುತ್ತೂರು ತಾಲೂಕು ಬಲ್ನಾಡು ದೇವಸ್ಯ ಎಂಬಲ್ಲಿ ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here